BIG NEWS: ಮತದಾನಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಶಿವಮೊಗ್ಗ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಬಿರುಸಿನಿಂದ ಸಾಗಿದ್ದು, ಈ ನಡುವೆ ಮತದಾನಕ್ಕೆ ತೆರಳುತ್ತಿದ್ದ ವ್ಯಕ್ತಿಯೋರ್ವ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಮತದಾನಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದಾಗ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.

32 ವರ್ಷದ ಮಂಜುನಾಥ್ ಮೃತ ದುರ್ದೈವಿ. ಮಂಜುನಾಥ್ ಚುರ್ಚಿಗುಂಡಿಯಿಂದ ಭ್ರದಾವತಿಗೆ ಮತದಾನಕ್ಕಾಗಿ ತೆರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read