BIG NEWS: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ ಕಾರು: 6 ಜನರಿಗೆ ಗಂಭೀರ ಗಾಯ

ಶಿವಮೊಗ್ಗ: ಚಾಲಕನ ನಿಯಂತ್ರಣತಪ್ಪಿದ ಕಾರೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಅಗರದಹಳ್ಳಿ ಬಳಿ ನಡೆದಿದೆ.

ಕುಟುಂಬವೊಂದು ಕಾರಿನಲ್ಲಿ ಕೊಲ್ಲೂರು, ಸಿಗಂದೂರು, ಜೋಗ ಪ್ರವಾಸ ಮುಗಿಸಿ ಚಿತ್ರದುರ್ಗಕ್ಕೆ ತೆರಳುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣತಪ್ಪಿದ ಕಾರು ಸೇತುವೆಯಿಂದ ಕೆಳಗೆ ಬಿದ್ದಿದೆ.

ಘಟನೆಯಲ್ಲಿ ಮಕ್ಕಳು ಸೇರಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಬೆಳಗಿನ ಜಾವ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read