ಶಿವಮೊಗ್ಗ: ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಗೆ ಬಲವಂತವಾಗಿ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಸಿಬ್ಬಂದಿ ಎಡವಟ್ಟು ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಎರಡನೇ ದಿನದ ಸಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿಯೋರ್ವನಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ತೆಗೆದಿಟ್ಟು ಪರೀಕ್ಷಾ ಕೇಂದ್ರಕ್ಕೆ ಹೋಗುವಂತೆ ಹೇಳಿದ್ದಾರೆ. ಆದರೆ ವಿದ್ಯಾರ್ಥಿ ಇದು ಗಾಯತ್ರಿ ದೀಕ್ಷೆಪಡೆದು ಹಾಕಿರುವ ಜನಿವಾರ ಇದನ್ನು ತೆಗೆಯುವುದಿಲ್ಲ ಎಂದು ಹೇಳಿದ್ದಾನೆ. ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರಕ್ಕೆ ಬಿಡಲ್ಲ ಎಂದಿದ್ದಾರೆ. ವಿದ್ಯಾರ್ಥಿ ಸಾಕಷ್ಟು ಬಾರಿ ಕೇಳಿಕೊಂಡರೂ ಒಪ್ಪದ ಸಿಬ್ಬಂದಿಗಳು ಬಲವಂತವಾಅಗಿ ವಿದ್ಯಾರ್ಥಿಯಿಂದ ಜನಿವಾರ ಹಾಗು ಆತನ ಕೈಲಿದ್ದ ಕಾಶಿದಾರವನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಸಿಇಟಿ ಪರೀಕ್ಷಾ ಕೇಂದ್ರದ ಸಿಬ್ಬಂದಿಗಳ ಈ ವರ್ತನೆಗೆ ವಿದ್ಯಾರ್ಥಿ ಕುಟುಂಬದವರು ಹಾಗೂ ಬ್ರಾಹ್ಮಣ ಮಹಾಸಭಾ, ವಿಪ್ರ ಸಂಘಟನೆ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿದೆ. ಸಿಇಟಿ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ. ಈ ಬಗ್ಗೆ ದೂರನ್ನು ಕೂದ ನೀಡಲಾಗಿದೆ.