HomeKarnatakaGOOD NEWS: ಶಿವಮೊಗ್ಗ-ಚೆನ್ನೈ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್

GOOD NEWS: ಶಿವಮೊಗ್ಗ-ಚೆನ್ನೈ ವಿಮಾನ ಹಾರಾಟಕ್ಕೆ ಡೇಟ್ ಫಿಕ್ಸ್

ಶಿವಮೊಗ್ಗ: ಮಲೆನಾಡ ಜನತೆಗೆ ಮತ್ತೊಂದು ಗುಡ್ ನ್ಯೂಸ್. ಶಿವಮೊಗ್ಗ ಹಾಗೂ ತಮಿಳುನಾಡಿನ ಚೆನ್ನೈ ನಡುವೆ ಕೆಲವೇ ದಿನಗಳಲ್ಲಿ ವಿಮಾನ ಹಾರಾಟ ಆರಂಭವಾಗಲಿದ್ದು, ಮುಹೂರ್ತ ಫಿಕ್ಸ್ ಆಗಿದೆ.

ಶಿವಮೊಗ್ಗದಿಂದ ಚೆನ್ನೈಗೆ ಆಗಸ್ಟ್ 15ರಿಂದ ವಿಮಾನಯಾನ ಸೇವೆ ಪ್ರಾರಂಭವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ.

ಚೆನ್ನೈ ವಿಮಾನ ಹಾರಾಟದ ಜೊತೆಗೆ ವಾರದಲ್ಲಿ ಒಂದು ದಿನ ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೂ ಸ್ಟೈಸ್ ಜೆಟ್ ವಿಮಾನ ಹಾರಾಟ ನಡೆಸಲಿದೆ.
ಮೋಡ ಮುಸುಕಿದ ವಾತಾವರಣ ಮತ್ತು ರಾತ್ರಿ ವೇಳೆಯಲ್ಲೂ ವಿಮಾನ ಲ್ಯಾಂಡಿಂಗ್ ಆಗುವಂತಹ ವ್ಯವಸ್ಥೆಯನ್ನು ತ್ವರಿತವಾಗಿ ಮಾಡುವಂತೆ ವಿಮಾನ ನಿಲ್ದಾಣದ ನಿರ್ವಹಣಾ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಈ ಸಂಬಂಧ ಹೊಸದಿಲ್ಲಿಯಲ್ಲಿ ಬುಧವಾರ ಅಧಿಕಾರಿಗಳ ಸಭೆ ಕರೆಯಲಾಗಿದೆ. ಶೀಘ್ರದಲ್ಲೆ ಸಮಸ್ಯೆ ನಿವಾರಣೆಯಾಗಲಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದಾಗಿ ಮಲೆನಾಡಿನ ಉದ್ಯಮ, ಜೀವನಮಟ್ಟ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಮತ್ತಷ್ಟು ಬಲ ನೀಡುವ ನಿರೀಕ್ಷೆ ಮೂಡಿಸಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular