ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವಿನ ಸಂಘರ್ಷ ತಾರಕ್ಕಕೇರಿದೆ. ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆದ ಕೈ ಕಾರ್ಯಕರ್ತರ ವರ್ತನೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ನುಗ್ಗಿ ಮೊಟ್ಟೆ ಎಸೆದಿದ್ದಾರೆ. ಅಲ್ಲದೇ ಕಚೇರಿ ಬಳಿ ಅಳವಡಿಸಲಾಗಿದ್ದ ಫ್ಲೆಕ್ಸ್ ಗಳನ್ನು ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಕಚೇರಿಗೆ ನುಗ್ಗುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಸಿಡಿದೆದ್ದಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆ ಬಿಜೆಪಿ ಕಚೇರಿಯತ್ತ ಮುನ್ನುಗ್ಗಲು ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿತ್ತಿದ್ದಂತೆ ಅಲರ್ಟ್ ಆದ ಪೊಲಿಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆದಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವಿನ ಮೊಟ್ಟೆ ಎಸೆತ, ಸಂಘರ್ಷ ತಡೆಯಲು ಪೊಲೀಸರು ಹರಸಾಹಸಪಟ್ಟಿದ್ದಾರೆ. ಮುಂಜಾಗೃತಾ ಕ್ರಮವಾಗಿ ಕಾಂಗ್ರೆಸ್ ಕಚೇರಿಯ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಿದ್ದಾರೆ. ಸುತಮುತ್ತಲಿನ ಅಂಗಡಿ, ಮುಂಗಟ್ಟು, ಹೋಟೆಲ್ ಗಳನ್ನು ಬಂದ್ ಮಾಡಲಾಗಿದೆ. ಇದೇ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿಯ 40ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

