BIG NEWS: ಬಿಜೆಪಿ-ಜೆಡಿಎಸ್ ಮೈತ್ರಿಗೆ ಕುಟುಕಿದ ಡಿಸಿಎಂ ಡಿ.ಕೆ.ಶಿವಕುಮಾರ್

ಶಿವಮೊಗ್ಗ: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ ನೀಡಿದ್ದಾರೆ.

ಶಿವಮೊಗ್ಗದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ದೇವಸ್ಥಾನ ಯಾರ ಆಸ್ತಿಯೂ ಅಲ್ಲ. ರಾಮಮಂದಿರ ಪೂಜೆಗೆ ಅವಕಾಶ ಕೊಟ್ಟಿದ್ದು ರಾಜೀವ್ ಗಾಂಧಿ. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ಹೇಳಿದರು.

ನಾವು ಜಾತಿ ಮೇಲೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿಲ್ಲ. ನೀತಿಗಳ ಮೇಲೆ ಗ್ಯಾರಂಟಿಗಳನ್ನು ಕೊಟ್ಟಿದ್ದೇವೆ. ಕೇಂದ್ರ ಸರ್ಕಾರ ನಮಗೆ 5 ಕೆಜಿ ಅಕ್ಕಿ ಕೊಡಲಿಲ್ಲ. ಆದರೂ ನಾವು 5 ಕೆಜಿ ಅಕ್ಕಿ ಹಣ ಕೊಡುತ್ತಿದ್ದೇವೆ. ಬಸ್ ಸಮಸ್ಯೆ ಪರಿಹರಿಸಲು ಸಾವಿರಕ್ಕೂ ಹೆಚ್ಚು ಬಸ್ ಖರೀದಿಸುತ್ತೇವೆ. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ತಂದಿದ್ದೇವೆ. ಈ ಯೋಜನೆ ದೇಶದಲ್ಲಿಯೇ ಇತಿಹಸ ಸೃಷ್ಟಿ ಮಾಡಿದೆ. ಗ್ಯಾರಂಟಿ ಯೋಜನೆಹಳು ಯಾವ ಕಾರಣಕ್ಕೂ ನಿಲ್ಲಲ್ಲ ಎಂದರು.

ಗ್ಯಾರಂಟಿ ಯೋಜನೆಗಳನ್ನು ನೋಡಿ ಅರಳಿದ್ದ ಕಮಲ ಮುದುಡಿದೆ. ತೆನೆಹೊತ್ತ ಮಹಿಳೆ ಬಿತ್ಟು ಹೆಚ್.ಡಿ.ಕುಮಾರಸ್ವಾಮಿ ಕಮಲ ಹಿಡಿದಿದ್ದಾರೆ ಎಂದು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಕುಟುಕಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read