BIG NEWS: ಶಿವಮೊಗ್ಗ ದಸರಾ ಉತ್ಸವಕ್ಕೆ ಅದ್ಧೂರಿ ಚಾಲನೆ

ಶಿವಮೊಗ್ಗ: ಅತ್ತ ಅರಮನೆ ನಗರಿ ಮೈಸೂರಿನಲ್ಲಿ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಜೃಂಭಣೆಯಿಂದ ಚಾಲನೆ ದೊರೆತಿದೆ. ಇದೇ ವೇಳೆ ಇತ್ತ ಶಿವಮೊಗ್ಗದಲ್ಲಿ ರಾಜ್ಯದ ಎರಡನೇ ಅತಿ ದೊಡ್ದ ದಸರಾ ಖ್ಯಾತಿಯ ಶಿವಮೊಗ್ಗ ದಸರಾ ಉತ್ಸವಕ್ಕೆ ಚಾಲನೆ ನೀಡಲಾಗಿದೆ.

ಶಿವಮೊಗ್ಗ ಪಾಲಿಕೆಯಿಂದ 650 ಕೆಜಿ ತೂಕದ ಬೆಳ್ಳಿ ಅಂಬಾರಿಯನ್ನು ಲಾರಿಯ ಮೇಲೆ ಮೆರವಣಿಗೆ ಮೂಲಕ ಕೋಟೆ ಚಂಡಿಕಾ ದುರ್ಗಾ ಪರಮೇಶ್ವರಿ ದೇವಾಲಯಕ್ಕೆ ತರಲಾಯಿತು.

ನಿವೃತ್ತ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಬೆಳ್ಳಿ ಮಟ್ಟಪದಲ್ಲಿ ವಿರಾಜಮಾನವಾದ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಇಂದಿನಿಂದ ಅಕ್ಟೋಬರ್ 4ರವರೆಗೆ ದೇವಾಲಯದಲ್ಲಿ ನವರಾತ್ರಿ ಉತ್ಸವ ಜರುಗಲಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ದಸರಾ ಸಂಭ್ರಮ-ಸಡಗರ ಮನೆ ಮಾಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read