BREAKING NEWS: ಶಿವಮೊಗ್ಗ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ರೈತರ ಆಕ್ರೋಶ

ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ತ ರೈತರ ಪ್ರತಿಭಟನೆ ಶಿವಮೊಗ್ಗದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶರಾವತಿ ಮುಳುಗಡೆ ಸಂತ್ರಸ್ತರುಗೆ ಹಕ್ಕು ಪತ್ರ ವಿತರಿಸಲಾಗಿದ್ದರೂ ಎಸಿ ಕಚೇರಿಯಿಂದ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಇದನ್ನು ಖಂಡಿಸಿ ಕೆಲ ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಆದಾಗ್ಯೂ ಸಂಬಂಧಪಟ್ಟ ಅಧಿಕಾರಿಗಳು ಅನ್ನದಾತನ ಹೋರಾಟಕ್ಕೆ ಸ್ಪಂದಿಸಿಲ್ಲ. ಇದರಿಂದ ಪ್ರತಿಭಟನಾ ನಿರತ ರೈತರ ಸಹನೆಯ ಕಟ್ಟೆ ಒಡೆದಿದ್ದು, ಇಂದು ಹೋರಾಟ ತೀವ್ರಗೊಳಿಸಿದ್ದಾರೆ.

ಜಿಲಾಧಿಕಾರಿ ಕಚೇರಿಯತ್ತ ಧಾವಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರನ್ನು ಪೊಲೀಸರು ಡಿಸಿ ಕಚೇರಿ ಬಳಿ ಬ್ಯಾರಿಕೇಡ್ ಗಳನ್ನು ಅಳವಡಿಸಿ ತಡೆಯಲು ಮುಂದಾಗಿದ್ದಾರೆ. ಈ ವೇಳೆ ರೊಚ್ಚಿಗೆದ್ದ ರೈತರು ಬ್ಯಾರಿಕೇಡ್ ಗಳನ್ನು ತಳ್ಳಿ, ಜಿಲ್ಲಾಧಿಕಾರಿ ಕಚೇರಿ ಒಳಗೆ ನುಗ್ಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಪರಿಸ್ಥಿತಿ ಕೈ ಮೀರುತ್ತಿದ್ದಂತೆ ಪೊಲೀಸರು ಹೋರಾಟಗಾರ ರೈತರ ಬಳಿ ತೆರಳಿ, ಮನವೊಲಿಕೆ ಮಾಡಿ ಅವರನ್ನು ಸಮಾಧಾನ ಪಡಿಸುವ ಯತ್ನ ನಡೆಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read