HomeKarnatakaBREAKING : ಶಿವಮೊಗ್ಗದಲ್ಲಿ ಘೋರ ಘಟನೆ : ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ...

BREAKING : ಶಿವಮೊಗ್ಗದಲ್ಲಿ ಘೋರ ಘಟನೆ : ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ಶಿವಮೊಗ್ಗ: ಅಪ್ಪ-ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಹೆತ್ತ ತಂದೆಯನ್ನೇ ಮಗನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕಿನ ಆಶ್ರಯ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಸುತ್ತಿಗೆಯಿಂದ ತಂದೆಯ ತಲೆಗೆ ಹೊಡೆದು ಮಗ ಕೊಲೆ ಮಾಡಿದ್ದಾನೆ. ಮುಸ್ತಫಾ ಬೇಗ್ (42) ಕೊಲೆಯಾದ ವ್ಯಕ್ತಿ. ಶಾಹಿದ್ ಬೇಗ್ ತಂದೆಯನ್ನೇ ಕೊಂದ ಮಗ.

ಶಿಕಾರಿಪುರ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮಗ ಶಾಹಿದ್ ನನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular