HomeEntertainmentನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ನಟನಿಗೆ ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ನಟಿ ಅರೆಸ್ಟ್

ಶಿವಮೊಗ್ಗ: ಕಿರುತೆರೆ ನಟನಿಗೆ ವಂಚಿಸಿದ್ದ ನಟಿ ಉಷಾ ರವಿಶಂಕರ್ ಅವರನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ನಟಿ ವಿರುದ್ಧ ಕೋರ್ಟ್ ನಲ್ಲಿ ನಟ ಶರವಣನ್ ಖಾಸಗಿ ದೂರು ದಾಖಲಿಸಿದ್ದರು. ನಟಿ ಉಷಾ ವಿರುದ್ದ ದೂರು ದಾಖಲಿಸಿದ್ದು, ಅವರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರನ್ನು ಬಂಧಿಸಿರುವ ಪೊಲೀಸರು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ನಟಿ ಉಷಾ ರವಿಶಂಕರ್ ಗೆ ವೈದ್ಯಕೀಯ ತಪಾಸಣೆ ಮಾಡಿಸಲಾಗಿದೆ. ನಂತರ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು ಎನ್ನಲಾಗಿದೆ.

‘ಒಂದಲ್ಲ ಎರಡು’, ‘ಸಲಗ’ ಚಿತ್ರಗಳು ಸೇರಿ ದಂತೆ ಹಲವು ಸಿನಿಮಾ, ಧಾರಾವಾಹಿಗಳಲ್ಲಿ ಉಷಾ ರವಿಶಂಕರ್ ನಟಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular