ಶಿವಮೊಗ್ಗ: ನೀರಿನ ಹೊಂಡಕ್ಕೆ ಬಿದ್ದು ಹನ್ನೆರಡು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಮಂಡಗಳಲೆ ಗ್ರಾಮದ ಬಳಿ ನಡೆದಿದೆ.
ಆದರ್ಶ(12) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಮಂಡಗಳಲೆ ಗ್ರಾಮದ ಬಳಿ ಘಟನೆ ನಡೆದಿದೆ. ಬಾಲಕ ಆದರ್ಶ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಕಾಲು ಜಾರಿ ಆಳವಾದ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕನನ್ನು ರಾಮಮೂರ್ತಿ ಮತ್ತು ವಿಕಾಸ್ ಅವರು ರಕ್ಷಣೆ ಮಾಡಿದ್ದಾರೆ. ಸಾಗರ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಬಾಲಕ ಕೊನೆಯುಸಿರೆಳೆದಿದ್ದಾನೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.(ಚಿತ್ರಕೃಪೆ: ಎಐ)
ಗಾಂಜಾ ವಶ
ಶಿವಮೊಗ್ಗ ಜಿಲ್ಲೆ ಸಾಗರ ನಗರದಲ್ಲಿ ಅಬಕಾರಿ ಪೊಲೀಸರು ದಾಳಿ ಮಾಡಿದ್ದಾರೆ. ಸಾಗರದ ಶ್ರೀಧರ ನಗರದಲ್ಲಿರುವ ಮನೆ ಮೇಲೆ ದಾಳಿ ಮಾಡಿ ಗಾಂಜಾ ಜಪ್ತಿ ಮಾಡಲಾಗಿದೆ. ಅಬ್ದುಲ್ ಅಜೀಮ್ ಅಲಿಯಾಸ್ ರಾಜೀವಲಿ ಶೇಖ್ ಮನೆಯ ಮೇಲೆ ದಾಳಿ ನಡೆಸಲಾಗಿದೆ. ಮನೆಯಲ್ಲಿ ಆಕ್ರಮವಾಗಿ ಸಂಗ್ರಹಿಸಿಟ್ಟಿದ್ದ 479 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಸುಮಾರು 48 ಸಾವಿರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಯ ವಿರುದ್ಧ ಎನ್.ಡಿ.ಪಿ.ಎಸ್. ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸಾಗರ ಉಪ ವಿಭಾಗದ ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಗಾಂಜಾ ಗಿಡ ಪತ್ತೆ
ಶಿವಮೊಗ್ಗ ಜಿಲ್ಲೆ ಸಾಗರದ ಬಿಹೆಚ್ ರಸ್ತೆಯ ಡಿವೈಎಸ್ಪಿ ಕಚೇರಿ ಸಮೀಪದಲ್ಲೇ ಗಾಂಜಾ ಗಿಡ ಬೆಳೆದಿರುವುದು ಪತ್ತೆಯಾಗಿದೆ. ಡಿವೈಎಸ್ಪಿ ಕಚೇರಿ ಎದುರು ವಾಹನ ಸ್ವಚ್ಚಗೊಳಿಸುವ ವಾಟರ್ ವಾಷ್ ಮಳಿಗೆಯ ಪಕ್ಕದಲ್ಲಿರುವ ಕನ್ಸರ್ ವೆನ್ಸಿಯಲ್ಲಿ ಗಾಂಜಾ ಗಿಡ ಕಂಡು ಬಂದಿದೆ. ಈ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿಯೂ ಹರಿದಾಡಿದೆ.
ಬಳಸಿ ಎಸೆದ ಗಾಂಜಾದಿಂದ ಗಿಡ ಹುಟ್ಟಿ ಬೆಳೆದಿರಬಹುದು, ಈ ವಿಷಯ ಪೊಲೀಸ್ ಇಲಾಖೆ ಗಮನಕ್ಕೆ ಬರುತ್ತಿದ್ದಂತೆ ಪ್ರಕರಣ ದಾಖಲಿಸಿ ತೆರವಿಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯ ಸಹಕಾರ ಮಹಾಮಂಡಳದ ಉಪಾಧ್ಯಕ್ಷರಾಗಿ ಬಿ.ಕೆ.ಶಿವಕುಮಾರ್ ಅವಿರೋಧ ಆಯ್ಕೆ
ಶಿವಮೊಗ್ಗ: ಇತ್ತೀಚಿಗೆ ನಡೆದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಇದರ ಪದಾಧಿಕಾರಿಗಳ ಚುನಾವಣೆಯಲ್ಲಿ ಭದ್ರಾವತಿಯ ಬಿ.ಕೆ. ಶಿವಕುಮಾರ್ ಅವರು ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸಹಕಾರ ಕ್ಷೇತ್ರಕ್ಕೆ ಇವರ ಸೇವೆ ಇನ್ನೂ ಹೆಚ್ಚಿನದಾಗಿ ಸಲ್ಲಿಸುವಂತಾಗಲಿ ಎಂದು ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಮತ್ತು ಜಿಲ್ಲೆಯ ಎಲ್ಲಾ ಸಹಕಾರಿಗಳು ಶುಭ ಹಾರೈಸಿದ್ದಾರೆ. ಸಹಕಾರ ಕ್ಷೇತ್ರಕ್ಕೆ ಇವರು ಸಾಕಷ್ಟು ಕೊಡುಗೆ ನೀಡಿದ್ದು, ಮುಂದಿಯೂ ಸಹಕಾರ ಕ್ಷೇತ್ರದ ಬೆಳವಣಿಗೆಗೆ ಸಹಕರಿಸುತ್ತಾರೆ ಎಂದು ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.

