HomeLatest NewsBREAKING: ಹುಲ್ಲಿನ ಬಣವಿಯಲ್ಲಿ ಮಾದಕ ವಸ್ತು ಸಂಗ್ರಹ: ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಸೀಜ್:...

BREAKING: ಹುಲ್ಲಿನ ಬಣವಿಯಲ್ಲಿ ಮಾದಕ ವಸ್ತು ಸಂಗ್ರಹ: ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ಸೀಜ್: ಆರೋಪಿ ಅರೆಸ್ಟ್

ಶಿವಮೊಗ್ಗ: ಮಾದಕ ವಸ್ತುಗಳ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿರುವ ಪೊಲೀಸರು, ಹಲವು ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟಿ ಗ್ರಾಮದಲ್ಲಿ ದಾಳಿ ನಡೆಸಿದ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಹುಲ್ಲಿನ ಬಣವಿಯಲ್ಲಿ ಅಡಗಿಸಿಟ್ಟಿದ್ದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

4 ಲಕ್ಷ ರೂಪಾಯಿ ಮೌಲ್ಯದ 8 ಕೆಜಿ ಗಾಂಜಾವನ್ನು ಹುಲ್ಲಿನ ಬಣವಿಯಲ್ಲಿ ಸಂಗ್ರಹಿಸಿದಳಾಗಿತ್ತು. ಇವುಗಳನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ಎಂದು ಗುರುತಿಸಲಾಗಿದೆ. ಈತ ಭದ್ರಾವತಿಯಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular