HomeKarnatakaಪೆಟ್ರೋಲ್ ಬಂಕ್ ಸಮೀಪವೇ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಪೆಟ್ರೋಲ್ ಬಂಕ್ ಸಮೀಪವೇ ಸಿಲಿಂಡರ್ ತುಂಬಿದ ಲಾರಿ ಪಲ್ಟಿ: ಅದೃಷ್ಟವಶಾತ್ ತಪ್ಪಿದ ಅನಾಹುತ

ಶಿವಮೊಗ್ಗ: ಪೆಟ್ರೋಲ್ ಬಂಕ್ ಸಮೀಪವೇ ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶಿವಮೊಗ್ಗ ಹೊರವಲಯದ ಒಡ್ಡಿನಕೊಪ್ಪ ಕ್ರಾಸ್ ನಲ್ಲಿ ನಡೆದಿದೆ.

ಮಾಚೇನಹಳ್ಳಿಯಿಂದ ಇಂಡೇನ್ ಅಡುಗೆ ಅನಿಲ ಸಿಲಿಂಡರ್ ಗಳನ್ನು ತುಂಬಿಕೊಂಡು ಎನ್.ಆರ್. ಪುರಕ್ಕೆ ತೆರಳುತ್ತಿದ್ದ ಲಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪೆಟ್ರೋಲ್ ಬಂಕ್ ಎದುರಲ್ಲಿಯೇ ಸಿಲಿಂಡರ್ ಗಳು ರಸ್ತೆಗೆ ಉರುಳಿ ಬಿದ್ದು ಗ್ರಾಮದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆಯಲ್ಲಿ ವಾಹನಗಳ ಸಂಚಾರ ತಡೆದಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಕೂಡ ಧಾವಿಸಿ ಬಂದು ಮುಂಜಾಗ್ರತೆ ಕ್ರಮ ಕೈಗೊಂಡಿದ್ದಾರೆ. ರಸ್ತೆಯಲ್ಲಿ ಉರುಳಿ ಬಿದ್ದ ಸಿಲಿಂಡರ್ ಗಳನ್ನು ರಸ್ತೆ ಬದಿಯಲ್ಲಿ ಜೋಡಿಸಿ ಬೇರೆ ಲಾರಿಗೆ ಲೋಡ್ ಮಾಡಿ ಕಳುಹಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular