HomeKarnatakaBREAKING NEWS: ಶಿವಮೊಗ್ಗ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕ ಸಸ್ಪೆಂಡ್

BREAKING NEWS: ಶಿವಮೊಗ್ಗ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣ; ಮುಖ್ಯ ಶಿಕ್ಷಕ ಸಸ್ಪೆಂಡ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಎಂಬುವವರನ್ನು ಅಮಾನತು ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಗುಡ್ಡದ ನೇರಲೆಕೆರೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಪ್ರಕರನ ಬೆಳಕಿಗೆ ಬರುತ್ತಿದ್ದಂತೆ ಪೋಷಕರು ಮುಖ್ಯ ಶಿಕ್ಷಕ ಹಾಗೂ ಸಹಯಕ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬೆನ್ನಲ್ಲೇ ಡಿಡಿಪಿಐ ಪರಮೇಶ್ವರಪ್ಪ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಪ್ರಭಾರಿ ಮುಖ್ಯ ಶಿಕ್ಷಕ ಶಂಕರಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular