ಶಿವಮೊಗ್ಗ: ಅತಿಥಿ ಉಪನ್ಯಾಸಕಿಗೆ ಕಾಲೇಜು ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವ ಘಟನೆ ಶ್ವಮೊಗ್ಗ ಜಿಲ್ಲೆಯ ಭದ್ರತಾವತಿಯಲ್ಲಿ ನಡೆದಿದೆ.
ಎನ್ ಇಎಸ್ ಶಿಕ್ಷಣ ಸಂಸ್ಥೆಯಲ್ಲಿ ಅತಿಥಿ ಉಪನ್ಯಾಸಕಿಗೆ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿ, ಜಾತಿ ನಿಂದನೆ ಮಾಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾರೆ. ಪ್ರಾಂಶುಪಾಲ ಶ್ರೀಪಾದ್ ಹೆಗಡೆ ವಿರುದ್ಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಾಂಶುಪಾಲ ಶ್ರೀಪಾದ್ ಹೆಗಡೆ, ಕಾರಿನಲ್ಲಿ ಕರೆದುಕೊಂಡು ಹೋಗುವಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಜಾತಿ ನಿಂದನೆ ಮಾಡಿದ್ದಾರೆ. ನಿನ್ನ ಗಂಡ ಇಲ್ಲದಿದ್ದರೆ ನನ್ನನ್ನು ಕರಿ ಎಂದು ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಅದೇ ಕಾಲೇಜಿನ ಇಬ್ಬರು ಮಹಿಳಾ ಸುಬ್ಬಂದಿಗಳು ಕೂಡ ಜಾತಿ ನಿಂದನೆ ಮಾಡಿದ್ದಾಗಿ ಆರೋಪಿಸಿದ್ದಾರೆ.
ಪ್ರಕರಣ ದಾಖಲಿಸಿ ಹಲವು ದಿನಗಳು ಕಳೆದರೂ ಈವರೆಗೂ ಆರೋಪಿ ಪ್ರಾಂಶುಪಾಲನನ್ನು ಬಂಧಿಸಿಲ್ಲ. ಸಂಸ್ಥೆ ಆಡಳಿತ ಮಂಡಳಿ ಕೂಡ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ. ಬದಲಾಗಿ ನನ್ನನ್ನೇ ಕೆಲಸದಿಂದ ತೆಗೆದು ಹಾಕಿದ್ದಾಗಿ ಅಲವತ್ತುಕೊಂಡಿದ್ದಾರೆ. ಆರೋಪಿ ಶ್ರೀಪಾದ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

