HomeKarnatakaಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಿವಮೊಗ್ಗ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ

ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಶಿವಮೊಗ್ಗ ಸೇರಿ ಹಲವೆಡೆ ಇಂದು ಶಾಲೆಗಳಿಗೆ ರಜೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಶಾಲೆಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸತತವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಕಾರಣ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ ಪ್ರಾಥಮಿಕ, ಹಿರಿಯ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವಕಾಲೇಜು,  ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳು, ಐಟಿಐ ಮತ್ತು ಡಿಪ್ಲೋಮೋ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಮಾನ್ಯ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ಆದೇಶ ಹೊರಡಿಸಿದ್ದಾರೆ

ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ವೆಂಕಟರಾಜಾ ರಜೆ ಘೋಷಣೆ ಮಾಡಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಮಾತ್ರ ಶುಕ್ರವಾರ ರಜೆ ನೀಡಿ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

ಪಶ್ಚಿಮ ಘಟ್ಟ ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಖಾನಾಪುರ ತಾಲೂಕಿನ ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ ನೀಡಲಾಗಿದೆ. ಇಂದು ಮತ್ತು ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಆರು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಸಕಲೇಶಪುರ, ಆಲೂರು, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ತಾಲೂಕಿನ ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular