HomeLatest NewsBREAKING: ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವು : ಓರ್ವ ಮಹಿಳೆ...

BREAKING: ಶಿವಮೊಗ್ಗದಲ್ಲಿ ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವು : ಓರ್ವ ಮಹಿಳೆ ಸ್ಥಿತಿ ಗಂಭೀರ

ಶಿವಮೊಗ್ಗ: ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದಾಗಿ ಅನಾಹುತಗಳು ಸಂಭವಿಸುತ್ತಿವೆ. ಧಾರಾಕಾರವಾಗಿ ಸುರುದ ಮಲೆಗೆ ಮನೆ ಗೋಡೆ ಕುಸಿದು ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ತಾಲೂಕಿನ ಮಂಡಗಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಡುಗಡಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮನೆ ಗೋಡೆ ಕುಸಿದ ಪರಿಣಾಮ ಸಿದ್ದಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೇಮಾವತಿ ಎಂಬ ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಇನ್ನು ಪರಶುರಾಮ್, ಪಲ್ಲವಿ, ಚೇತನ್ ಎಂಬುವವರು ಸಣ್ಣ-ಪುಟ್ಟ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular