HomeKarnatakaBREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

BREAKING NEWS: ಭಾರಿ ಮಳೆ ಮುನ್ಸೂಚನೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಮಳೆಯಿಂದಾಗಿ ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ.

ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೊಸನಗರ ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹೊಸನಗರ ತಾಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವರುಣಾರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್, ಜುಲೈ 16ರಂದು ತಾಲೂಕಿನಾದ್ಯಂತ ಎಲ್ಲಾ ಅಂಗನಾವಾಡಿ, ಖಾಸಗಿ ಹಾಗೂ ಸರ್ಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹವಾಮಾನ ಇಲಾಖೆ ನಾಳೆ ಮಳೆ ಪ್ರಮಾಣ ಇನ್ನಷ್ಟು ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಬಿಇಒ ಹೆಚ್.ಆರ್.ಕೃಷ್ಣಮೂರ್ತಿ ತಿಳಿಸಿದ್ದಾರೆ.

ಇನ್ನು ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular