HomeKarnatakaಶಿವಮೊಗ್ಗ: ಹೋಟೆಲ್, ಹಾಸ್ಟೆಲ್ ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ: ಹೋಟೆಲ್, ಹಾಸ್ಟೆಲ್ ಗಳಿಗೆ ಅಧಿಕಾರಿಗಳ ದಿಢೀರ್ ಭೇಟಿ, ಪರಿಶೀಲನೆ

ಶಿವಮೊಗ್ಗ: ಆಹಾರ ಉದ್ಯಮಗಳಲ್ಲಿ ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ನೈರ್ಮಲಕ್ಕೆ ಸಂಬಂಧಿಸಿದ ಲೋಪ ದೋಷಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಉಪ ವಿಭಾಗ ಅಧಿಕಾರಿ ಡಾ. ಮೈತ್ರಿ ಅವರ ನೇತೃತ್ವದ ತಂಡ ಇಂದು ಕೆಲ ಹೋಟೆಲ್, ಸರ್ಕಾರಿ ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ವಿಶೇಷ ಆಹಾರ ಸುರಕ್ಷಿತ ತಪಾಸಣಾ ಅಭಿಯಾನದ ನಿಮಿತ್ತ ಇಂದು ಭೇಟಿ ನೀಡಿದ ಅಧಿಕಾರಿಗಳು, ಮಾನವ ಸೇವನೆಗೆ ಯೋಗ್ಯವಾದ ಆಹಾರ ಪದಾರ್ಥಗಳನ್ನು ತಯಾರಿಸಿ, ಸಂಗ್ರಹಿಸಿ ಮಾರಾಟ ಮಾಡುತ್ತಿರುವ ಕೆಲ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಆಹಾರ ಸುರಕ್ಷಿತ ನಿಯಮಗಳ ಬಗ್ಗೆ ಕಟ್ಟುನಿಟ್ಟಾಗಿ ಪಾಲಿಸಲು ಹೋಟೆಲ್ ಮತ್ತು ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಲಾಯಿತು.

ಅವಧಿ ಮೀರಿದ ಮತ್ತು ಬಳಕೆಗೆ ಯೋಗ್ಯವಲ್ಲದ ಆಹಾರ ಪದಾರ್ಥಗಳನ್ನು ತಕ್ಷಣ ಪ್ರತ್ಯೇಕಿಸಿ ಅವುಗಳ ತಯಾರಿಕೆ ಅಥವಾ ಮಾರಾಟದಲ್ಲಿ ಬಳಕೆ ಆಗದಂತೆ ಸೂಕ್ತ ರೀತಿಯ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ ವಿಭಾಗಾಧಿಕಾರಿಗಳು ಸೂಕ್ತ ತಾಪಮಾನದಲ್ಲಿ ಸ್ವಚ್ಛ ಹಾಗೂ ಆಹಾರ ಸುರಕ್ಷಿತ ಕಂಟೇನರ್ ಗಳಲ್ಲಿ ಸಂಗ್ರಹಿಸಬೇಕು ಮತ್ತು ಅಡುಗೆಮನೆ ಆಹಾರ ತಯಾರಿಕಾ ಸ್ಥಳ ಸಂಗ್ರಹಣ ಪ್ರದೇಶಗಳನ್ನು ಸ್ವಚ್ಛ ಮತ್ತು ಶುಷ್ಕ ವಾತಾವರಣದಲ್ಲಿ ನಿರ್ವಹಿಸಬೇಕೆಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಲು, ಮಾಂಸ, ಮೊಟ್ಟೆ ಮತ್ತು ಸಿದ್ಧಹಾರಗಳನ್ನು ನಿಗದಿತ ತಾಪಮಾನದಲ್ಲಿ ಸಂಗ್ರಹಿಸಬೇಕು. ರೆಫ್ರಿಜರೇಟರ್ ಕೂಲರ್ ಹಾಗೂ ಇತರೆ ತಾಪಮಾನ ನಿಯಂತ್ರಣ ಸಾಧನೆಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಆಹಾರ ಸಂರಕ್ಷಣೆ ಹಾಗೂ ಕುಡಿಯುವ ನೀರಿನ ಬಗ್ಗೆ ಸೂಕ್ತ ಗಮನ ಹರಿಸಬೇಕು ಎಂದು ತಿಳಿಸಿದರು.

ಆಹಾರ ನಿರ್ವಹಿಸುವ ಸಿಬ್ಬಂದಿ ಅವರಿಗೆ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಬೇಕು. ಜೊತೆಗೆ ಸುರಕ್ಷಿತ ಆಹಾರ ನಿರ್ವಹಣಾ ವಿಧಾನಗಳ ಕುರಿತು ಅಗತ್ಯ ತರಬೇತಿಯನ್ನು ನೀಡಬೇಕೆಂದು ಅಧಿಕಾರಿಗಳು ತಿಳಿಸಿದರು.

ತಪಾಸಣಾ ಸಮಯದಲ್ಲಿ ಕಂಡು ಬಂದ ಲೋಪ ದೋಷಗಳನ್ನು ಇನ್ನು ಹತ್ತು ದಿನದೊಳಗೆ ಸರಿಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಆಹಾರ ಸುರಕ್ಷಿತ ಮಾನದಂಡಗಳ ಅನ್ವಯ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ., ಮೈತ್ರಿಯವರು ಈ ಸಂದರ್ಭದಲ್ಲಿ ಭೇಟಿ ನೀಡಿದ ಹೋಟೆಲ್ ಉದ್ಯಮದಾರರಿಗೆ ತಿಳಿಸಿದರು.

ಇಂದು ನಡೆದ ದಿಢೀರ್ ಭೇಟಿಯ ಸಮಯದಲ್ಲಿ ಉಪವಿಭಾಗ ಅಧಿಕಾರಿ ಡಾ.,ಮೈತ್ರಿ ಅವರ ಜೊತೆಗೆ ತಾಲೂಕು ದಂಡಾಧಿಕಾರಿ ವಿ.ಎಸ್. ರಾಜೀವ್, ತಾಲೂಕು ಆರೋಗ್ಯ ಅಧಿಕಾರಿ ಚಂದ್ರಶೇಖರ್, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಸಿಬ್ಬಂದಿ ಸೇರಿದಂತೆ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು.

ಭೇಟಿ ಸಮಯದಲ್ಲಿ ಹೋಟೆಲ್ ಹರ್ಷ ಫರ್ನ್, ನಿರಾಶ್ರಿತರ ಪರಿಹಾರ ಕೇಂದ್ರ ತಾವರೆಕೊಪ್ಪ, ವಿನೋಬನಗರದ ಸವಿ ಬೇಕರಿ ಹಾಗೂ ಗಾಂಧಿನಗರದ ವಿಧಾತ್ರಿ ಭವನ ಇಲ್ಲಿಗೆ ಭೇಟಿ ನೀಡಲಾಯಿತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular