HomeKarnatakaBIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

BIG NEWS: ಪತ್ನಿ ಮೇಲೆ ಹಲ್ಲೆ ನಡೆಸಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪತಿ

ಶಿವಮೊಗ್ಗ: ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪತಿ ಮಹಾಶಯ ಬಳಿಕ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುರಳಿಕೊಪ್ಪದಲ್ಲಿ ನಡೆದಿದೆ.

ಸದಾನಂದ ಭಟ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಹಲ್ಲೆಗೊಳಗಾದ ಪತ್ನಿ ಸವಿತಾರನ್ನು ರಿಪ್ಪನ್ ಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೌಟುಂಬಿಕ ಕಲಹಕ್ಕೆ ಸದಾನಂದ ಭಟ್, ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಗಂಭೀರ ಸ್ಥಿತಿ ತಲುಪಿದ ಪತ್ನಿ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಪಟಗುಪ್ಪ ಸೇತುವೆ ಮೇಲಿಂದ ಜಿಗಿದು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಿಪ್ಪನ್ ಪೇಟೆ ಹಾಗೂ ಹೊಸನಗರ ಎರಡು ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular