HomeJobsಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಆಗಸ್ಟ್ 29 ನೇರ ಸಂದರ್ಶನ

ಖಾಸಗಿ ಕಂಪನಿಗಳಲ್ಲಿ ಉದ್ಯೋಗಾವಕಾಶ: ಆಗಸ್ಟ್ 29 ನೇರ ಸಂದರ್ಶನ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರ ವತಿಯಿಂದ ಆಗಸ್ಟ್ 29 ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸುತಿದ್ದು, ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಅರ್ಹರಾಗಿರುತ್ತಾರೆ.

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 9380663606/ 9108235132 ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular