ಶಿವಮೊಗ್ಗ: ಶಿವಮೊಗ್ಗದ ಕೇಂದ್ರ ಕಾರಾಗೃಹದ ಮೇಲೆ ಜೈಲು ಸಿಬ್ಬಂದಿಗಳೇ ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ನಿಷೇಧಿತ ವಸ್ತುಗಳು ಪತ್ತೆಯಾಗಿವೆ.
ಕೆಲ ದಿನಗಳ ಹಿಂದೆ ಜೈಲಿನಲ್ಲಿ ಗಾಂಜಾ ಸೇರಿದಂತೆ ಹಲವಾರು ನಿಷೇಧಿತ ವಸ್ತುಗಳು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಆಗಿ ಜೈಲಿನಲ್ಲಿ ದಾಳಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಮೂರು ಮೊಬೈಲ್ ಗಳು, ನಾಲ್ಕು ಸಿಮ್ ಕಾರ್ಡ್, ಮೂರು ಡೇಟಾ ಕೇಬಲ್, ಎರಡು ಇಯರ್ ಫೋನ್, ಒಂದು ಚಾರ್ಜರ್ ಸಿಕ್ಕಿದೆ.
ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ಜೈಲು ಕಾರಾಗೃಹ ಸಿಬ್ಬಂದಿಗಳ ಈ ಕಾರ್ಯಾಚರಣೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಶ್ಲಾಘಿಸಿದ್ದು, 10,000 ರೂಪಾಯಿ ಬಹುಮಾನ ಘೋಷಿಸಿದ್ದಾರೆ.

