HomeLatest NewsSHOCKING NEWS: ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

SHOCKING NEWS: ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ

ಶಿವಮೊಗ್ಗ: ಶಿವಮೊಗದ ಸೋಗಾನೆ ಕೇಂದ್ರ ಕಾರಾಗೃಹದಲ್ಲಿ ಖೈದಿಯೊಬ್ಬನ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದೆ

ಖೈದಿ ದೌಲತ್ (30) ಎಂಬಾತನ ಹೊಟ್ಟೆಯೊಳಗೆ ಮೊಬೈಲ್ ಪತ್ತೆಯಾಗಿದೆ. ಸದ್ಯ ಆತನನ್ನು ಮೆಗ್ಗಾನ್‌ ಆಸ್ಪತ್ರೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಮೊಬೈಲ್‌ ಫೋನ್‌ ಹೊರಗೆ ತೆಗೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣವೊಂದರಲ್ಲಿ ಶಿವಮೊಗ್ಗ ನ್ಯಾಯಾಲಯ ದೌಲತ್ ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜೂನ್‌ 24ರಂದು ಜೈಲಿನ ಆಸ್ಪತ್ರೆಗೆ ಬಂದು, ತಾನು ಕಲ್ಲು ನುಂಗಿದ್ದೇನೆ ಎಂದು ವೈದ್ಯರಿಗೆ ತಿಳಿಸಿದ್ದ ಖೈದಿಯನ್ನು ಪರೀಕ್ಷಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ವೈದ್ಯರು ರವಾನಿಸಿದ್ದರು.

ಎಕ್ಸ್‌ರೇ ಮಾಡಿದಾಗ ಖೈದಿ ದೌಲತ್‌ ಹೊಟ್ಟೆಯಲ್ಲಿ ವಸ್ತು ಇರುವುದು ಪತ್ತೆಯಾಗಿದೆ. ಶಸ್ತ್ರಚಿಕಿತ್ಸೆ ನಡೆಸಿದಾಗ ಖೈದಿ ಹೊಟ್ಟೆಯಲ್ಲಿ ಮೊಬೈಲ್‌ ಫೋನ್‌ ಇರುವುದು ಗೊತ್ತಾಗಿದೆ.

ಜೈಲಿನೊಳಗೆ ಮೊಬೈಲ್‌ ಫೋನ್‌ ತಲುಪಿರುವ ಕುರಿತು ತನಿಖೆ ನಡೆಸುವಂತೆ ಕೇಂದ್ರ ಕಾರಾಗೃಹದ ಅಧೀಕ್ಷಕ ರಂಗನಾಥ್‌ ಆದೇಶ ಹೊರಡಿಸಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular