HomeKarnatakaSSLC, PUC, ಪದವೀಧರರಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

SSLC, PUC, ಪದವೀಧರರಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಖಾಸಗಿ ಕಂಪನಿಗಳಲ್ಲಿ ಉದ್ಯೋಗ

ಶಿವಮೊಗ್ಗ: ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಇವುಗಳ ಸಂಯುಕ್ತಾಶ್ರಯದಲ್ಲಿ ಫೆ. 24 ರಂದು ಶಿವಮೊಗ್ಗದ ಬಾಲರಾಜ್ ಅರಸ್ ರಸ್ತೆ, ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜ ಆವರಣದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಸಂದರ್ಶನದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ/ಪಿಯುಸಿ/ ಐಟಿಐ/ ಡಿಪ್ಲೊಮಾ/ಬಿಇ ಮತ್ತು ಯಾವುದೇ ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣ/ಅನುತ್ತೀರ್ಣ ಹೊಂದಿದ ಅಭ್ಯರ್ಥಿಗಳು ಬಯೊಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವುದು.

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ http://forms.gle/se41paGCoRiexPPP9 ರಲ್ಲಿ ಅಥವಾ ಸ್ಥಳದಲ್ಲೆ ನೇರವಾಗಿ ನೊಂದಾಯಿಸಿಕೊಳ್ಳಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-255294/ 9019485688 ಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುರೇಶ್ ಹೆಚ್.ಎಂ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular