BREAKING NEWS: ಶಿವಮೊಗ್ಗದಲ್ಲಿ 11 ಜನರಿಗೆ ಮಂಗನ ಕಾಯಿಲೆ ಪತ್ತೆ; ಹೆಲ್ತ್ ಬುಲೆಟಿನ್ ಬಿಡುಗಡೆ

ಶಿವಮೊಗ್ಗ: ಮಲೆನಾಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ 11 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾಗಿದೆ.

ಶಿವಮೊಗ್ಗ ಜಿಲ್ಲಾ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿ 19 ಜನರ ರಕ್ತದ ಮಾದರಿ ಪರೀಕ್ಷಿಸಲಾಗಿದ್ದು, ಅವರಲ್ಲಿ 11 ಜನರಲ್ಲಿ ಮಂಗನ ಕಾಯಿಲೆ ದೃಢಪಟ್ಟಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೂವರಲ್ಲಿ ಕೆ.ಎಫ್.ಡಿ ಸೋಂಕು ಪತ್ತೆಯಾಗಿದೆ. ಹೊಸನಗರ ತಾಲೂಕಿನ 8 ಜನರಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಈವರೆಗೆ ಮಂಗನ ಕಾಯಿಲೆಯ ವ್ಯಾವುದೇ ಸೋಂಕು ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read