HomeLatest NewsBREAKING NEWS: ಶಿವಮೊಗ್ಗ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

BREAKING NEWS: ಶಿವಮೊಗ್ಗ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವು

ಶಿವಮೊಗ್ಗ: ಕೃಷಿ ಹೊಂಡದಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಯಡವಾಲ ಗ್ರಾಮದಲ್ಲಿ ನಡೆದಿದೆ.

ಗೌತಮ್ ನಾಯ್ಕ್ (22) ಹಾಗೂ ಚಿರಂಜೀವಿ (22) ಮೃತ ಯುವಕರು. ಶಿವಮೊಗ್ಗದ ಸ್ನೇಹಿತ ಗೌತಮ್ ಮನೆಗೆ 10 ಜನ ಯುವಕರು ಬಂದಿದ್ದರು. ಮನೆಗೆ ಭೇತಿ ನೀಡಿದ ಬಳಿಕ ನಿನ್ನೆ ತೋಟದಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ಬಳಿಕ ರಾತ್ರಿ ಕೃಷಿ ಹೊಂಡದ ಬಳಿ ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಹೋದಾಗ ಓರ್ವ ಯುವಕ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಹೋಗಿ ಮತ್ತೋರ್ವ ಯುವಕ ಕೂಡ ನೀರಿನಲ್ಲಿ ಮುಳುಗಿದ್ದಾನೆ. ಇಬ್ಬರು ಯುವಕರೂ ಕೃಷೀಹೊಂಡದಲ್ಲಿ ಸಾವನ್ನಪ್ಪಿದ್ದಾರೆ.

ಮೃತದೇಹಗಳನ್ನು ಮೇಲಕ್ಕೆತ್ತಿ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular