HomeKarnatakaBIG NEWS: ಚಲಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಂಕಿ: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್

BIG NEWS: ಚಲಿಸುತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬೆಂಕಿ: ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್

ಶಿವಮೊಗ್ಗ: ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ರಸ್ತೆ ಮಧ್ಯೆಯೇ ಬಸ್ ಧಗಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಏಕಏಕಿ ಬೆಂಕಿ ಕಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಹಾಗೂ ಕಂಡಕ್ಟರ್ ಬಸ್ ನ್ನು ರಸ್ತೆ ಮಧ್ಯೆಯೇ ನಿಲ್ಲಿಸಿ, ಪ್ರಯಾಣಿಕರನ್ನು ಬಸ್ ನಿಂದ ಇಳಿಯುವಂತೆ ಸೂಚಿಸಿದ್ದಾರೆ.

ಪ್ರಯಾಣಿಕರು ಬಸ್ ನಿಂದ ಇಳಿಯುತ್ತಿದ್ದಂತೆ ಬೆಂಕಿ ಬಸ್ ತುಂಬೆಲ್ಲ ವ್ಯಾಪಿಸಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಟ್ಕಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular