HomeKarnatakaಮೊಬೈಲ್, ಆಧಾರ್ ಕಳೆದುಕೊಂಡು ಊರಿಗೆ ಮರಳಲು ಕಷ್ಟ ಪಡುತ್ತಿದ್ದ ಯುವತಿ ರಕ್ಷಿಸಿದ ‘ಅಕ್ಕ ಪಡೆ’

ಮೊಬೈಲ್, ಆಧಾರ್ ಕಳೆದುಕೊಂಡು ಊರಿಗೆ ಮರಳಲು ಕಷ್ಟ ಪಡುತ್ತಿದ್ದ ಯುವತಿ ರಕ್ಷಿಸಿದ ‘ಅಕ್ಕ ಪಡೆ’

ಶಿವಮೊಗ್ಗ: ಮೊಬೈಲ್ ಹಾಗೂ ದಾಖಲೆಗಳನ್ನು ಕಳೆದುಕೊಂಡು ಊರಿಗೆ ಮರಳಿ ಹೋಗಲು ಕಷ್ಟ ಪಡುತ್ತಿದ್ದ ಯುವತಿಯನ್ನು ಅಕ್ಕ ಪಡೆ ರಕ್ಷಿಸಿದ್ದು, ತಾಯಿಯೊಂದಿಗೆ ಕಳುಹಿಸಿಕೊಟ್ಟಿದೆ.

ಅಕ್ಕ ಪಡೆಯ ಅಧಿಕಾರಿಗಳು ಶಿವಮೊಗ್ಗ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿರುವಾಗ ಒಬ್ಬ ಯುವತಿ ಒಬ್ಬಳೇ ಕುಳಿತಿರುವುದು ಕಂಡು ಬಂದಿದೆ. ಆಕೆಯನ್ನು ವಿಚಾರಿಸಿದಾಗ 19 ವರ್ಷದ ಯುವತಿ, ಆಕೆಯ ವಾಸ ಅರಸೀಕೆರೆ, ಕಾರಣಾಂತರದಿಂದ ಶಿವಮೊಗ್ಗಕ್ಕೆ ಬಂದಿದ್ದಾಗ ತನ್ನ ಮೊಬೈಲ್ ಹಾಗೂ ಆಧಾರ್ ಕಾರ್ಡ್ ಮತ್ತು ಇತರೆ ದಾಖಲೆಗಳನ್ನು ಕಳೆದುಕೊಂಡಿದ್ದಾಳೆ ಎನ್ನುವುದು ಗೊತ್ತಾಗಿದೆ.

ಈ ವಿಚಾರ ತನ್ನ ತಂದೆ ತಾಯಿಗೆ ತಿಳಿಸಲು ಆಗದೆ ಹಾಗೆಯೇ ತನ್ನ ಊರಿಗೆ ವಾಪಾಸ್ ಹೋಗಲು ಸಾಧ್ಯವಾಗದೇ ಒಬ್ಬಳೆ ಇಲ್ಲಿ ಕುಳಿತಿರುತ್ತೇನೆ ಎಂದು ತಿಳಿಸಿದ್ದಾಳೆ. ಹೆಣ್ಣು ಮಗಳು ಒಬ್ಬಳೆ ಇದ್ದ ಕಾರಣ ಆಕೆಯ ತಾಯಿಯ ಫೋನ್ ನಂಬರ್ ಪಡೆದುಕೊಂಡು ಅವರನ್ನು ಸಂಪರ್ಕಿಸಿ ಅವರಿಗೆ ಈ ವಿಚಾರವನ್ನು ತಿಳಿಸಿದ್ದಾರೆ. ಅವರು ತಾವೇ ಬಂದು ಮಗಳನ್ನು ಕರೆದುಕೊಂಡು ಹೋಗುತ್ತೇವೆ ಎಂದು ಹೇಳಿದ್ದು, ನಂತರ ಯುವತಿಯನ್ನು ಸುರಕ್ಷಿತವಾಗಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳಾ ಅಧಿಕಾರಿಗಳೊಂದಿಗೆ ಇರಿಸಿದ್ದು, ಆ ನಂತರ ಆ ಯುವತಿಯ ತಾಯಿಯು ಬಂದು ತನ್ನ ಮಗಳನ್ನು ಕರೆದುಕೊಂಡು ಹೋಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭದ್ರಾ ಕಾಡಾ ಕಚೇರಿಯಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು ಹಾಗೂ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

​ಶಿವಮೊಗ್ಗ: ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ(ಕಾಡಾ) ಕೇಂದ್ರ ಕಚೇರಿಯಲ್ಲಿ ಬುಧವಾರ ನೀರು ಬಳಕೆದಾರರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳಿಗಾಗಿ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.

​ಕಾರ್ಯಾಗಾರದಲ್ಲಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ಸಹಕಾರ) ಡಾ. ನಾಗೇಶ್ ಎಸ್. ಡೋಂಗರೆ ಅವರು ನೀರು ಬಳಕೆದಾರ ಸಹಕಾರ ಸಂಘಗಳ ಆಡಳಿತಾಧಿಕಾರಿಗಳಿಗೆ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಸಮಗ್ರ ತರಬೇತಿ ನೀಡಿದರು.

​ರೈತರು ಒಗ್ಗಟ್ಟಿನಿಂದ ಬೆಳೆ ಬೆಳೆಯಲು ಕಾಡಾ ಅಧ್ಯಕ್ಷರ ಕರೆ:

ನಂತರ ಕಾಡಾ ಅಧ್ಯಕ್ಷ ಕೆ.ಪಿ. ಅಂಶುಮಂತ್ ಅವರ ಅಧ್ಯಕ್ಷತೆಯಲ್ಲಿ ದಾವಣಗೆರೆ, ಚನ್ನಗಿರಿ ಹಾಗೂ ಹರಿಹರ ತಾಲೂಕುಗಳ ನೀರು ಬಳಕೆದಾರರ ಸಹಕಾರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರುಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ನಡೆಯಿತು.

​ಈ ಸಂದರ್ಭದಲ್ಲಿ ಮಾತನಾಡಿದ ಅಧ್ಯಕ್ಷರು, “ನೀರಾವರಿ ಕ್ಷೇತ್ರದಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಜವಾಬ್ದಾರಿ ಹಿರಿದಾದುದು. ರೈತರು ಮಣ್ಣಿನ ಫಲವತ್ತತೆಯನ್ನು ಕಾಪಾಡಿಕೊಳ್ಳುವ ಜೊತೆಗೆ ನೀರನ್ನು ಮಿತವಾಗಿ ಬಳಸುವುದನ್ನು ರೂಢಿಸಿಕೊಳ್ಳಬೇಕು. ಸಹಕಾರ ಸಂಘಗಳನ್ನು ವಿವಿಧೋದ್ದೇಶ ಸಂಘಗಳನ್ನಾಗಿ ಪರಿವರ್ತಿಸಿ, ಅವುಗಳಿಂದ ದೊರೆಯುವ ಸೌಲಭ್ಯಗಳನ್ನು ಗರಿಷ್ಠ ಮಟ್ಟದಲ್ಲಿ ಪಡೆದುಕೊಳ್ಳಬೇಕು ಹಾಗೂ ರೈತರೆಲ್ಲರೂ ಒಗ್ಗಟ್ಟಿನಿಂದ ಬೆಳೆ ಬೆಳೆಯಬೇಕು” ಎಂದು ಕರೆ ನೀಡಿದರು.

​ಕೃಷಿ ಯಂತ್ರೋಪಕರಣಗಳ ವಿತರಣೆ:

ಕಾರ್ಯಕ್ರಮದ ಅಂಗವಾಗಿ ಅರ್ಹ ನೀರು ಬಳಕೆದಾರ ಸಹಕಾರ ಸಂಘಗಳಿಗೆ ಕಾಡಾ ಪ್ರಾಧಿಕಾರದ ವತಿಯಿಂದ ಕೃಷಿ ಯಂತ್ರೋಪಕರಣಗಳನ್ನು ವಿತರಿಸಲಾಯಿತು.

​ಈ ಸಂದರ್ಭದಲ್ಲಿ ಕಾಡಾ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಇಂಜಿನಿಯರ್ ಆರ್. ಸತೀಶ್, ಭೂ ಅಭಿವೃದ್ಧಿ ಅಧಿಕಾರಿ(ತಾಂತ್ರಿಕ) ಪ್ರಶಾಂತ್ ಕೆ., ಉಪಆಡಳಿತಾಧಿಕಾರಿ(ಪ್ರ) ಶ್ರೀನಿವಾಸ್ ಚಿಂತಾಲ, ಭೂ ಅಭಿವೃದ್ಧಿ ಅಧಿಕಾರಿ(ಕೃಷಿ), ಭದ್ರಾ ಕಾಡಾ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಹಾಗೂ ದಾವಣಗೆರೆ ವಿಭಾಗದ ನೀರಾವರಿ ನಿಗಮದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular