ಶಿವಮೊಗ್ಗ: 3,000 ರೂಪಾಯಿ ಲಂಚ ಸ್ವೀಕರಿಸುತ್ತಿದಾಗ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕುಮಾರ್ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ನೀಡಲು ಕುಮಾರ್ ನಾಯ್ಕ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಶ್ರೀರಾಂಪುರದ ವಿನೋದ್ ಎಂಬುವವರಿಂದ ಲಂಚ ಪಡೆಯುತ್ತಿದ್ದ ವೇಳೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕುಮಾರ್ ನಾಯ್ಕ್ ಅವರನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.