HomeKarnatakaBIG NEWS: ಇ-ಖಾತೆ ಮಾಡಲು ಲಂಚಕ್ಕೆ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

BIG NEWS: ಇ-ಖಾತೆ ಮಾಡಲು ಲಂಚಕ್ಕೆ ಬೇಡಿಕೆ: ಪಿಡಿಒ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಇ-ಖಾತೆ ಮಾಡಿಕೊಡಲು ಲಂಚಕ್ಕೆ ಬೇದಿಕೆ ಇಟ್ಟಿದ್ದ ಪಿಡಿಒ ರೆಡ್ ಹ್ಯಾಂದ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಇಂಡುವಳ್ಳಿಯಲ್ಲಿ ನಡೆದಿದೆ.

ಈಶ್ವರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಇಂಡುವಳ್ಳಿ ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ. ಇಂದುವಳ್ಳಿಯಲ್ಲಿನ ತಮ್ಮ ಜಮೀನಿನ ಇ-ಖಾತಾ ಮಾಡಿಕೊಡುವಂತೆ ಮೊಹಮ್ಮದ್ ಗೌಸ್ ಎಂಬುವವರು ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರು. ಪಿಡಿಒ ಈಶ್ವರಪ್ಪ ಇ-ಖಾತೆ ಮಾಡಿಕೊಡಲು ಸತಾಯಿಸುತ್ತಿದ್ದರು. ಬಳಿಕ 5000 ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಇದೇ ಕಾರಣಕ್ಕೆ ಮೊಹಮ್ಮದ್ ಗೌಸ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಸೊರಬ ಪಟ್ಟಣದ ಪೋಸ್ಟ್ ಆಫೀಸ್ ಬಳಿ ಪಿಡಿಒ ಈಶ್ವರಪ್ಪ, ಮೊಹಮ್ಮದ್ ಗೌಸ್ ಅವರಿಂದ ಲಂಚದ ಹನ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಪಿಡಿಒನನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular