ಶಿವಮೊಗ್ಗ: ಶಿವಮೊಗ್ಗದಲ್ಲಿ ಮಾರಕಾಸ್ತ್ರಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಅಮ್ಜದ್ (38) ಮೃತ ವ್ಯಕ್ತಿ. ಅ.2ರಂದು ಶಿವಮೊಗ್ಗದ ಎನ್.ಟಿ.ರಸ್ತೆಯಲ್ಲಿ ಅಮ್ಜದ್ ಮೇಲೆ ಇಬ್ಬರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಗಾಯಾಳು ಅಮ್ಜದ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಮ್ಜದ್ ಮೃತಪಟ್ಟಿದ್ದಾರೆ.