HomeKarnatakaBREAKING NEWS: ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕಿಕೊಂಡು ವ್ಯಕ್ತಿ ಆತ್ಮಹತ್ಯೆ

BREAKING NEWS: ಸಾಲಗಾರರ ಕಿರುಕುಳಕ್ಕೆ ಬೆಂಕಿ ಹಚ್ಚಿಕಿಕೊಂಡು ವ್ಯಕ್ತಿ ಆತ್ಮಹತ್ಯೆ

ಶಿವಮೊಗ್ಗ: ಸಾಲಗಾರರ ಕಾಟಕ್ಕೆ ಬೇಸತ್ತು ವ್ಯಕ್ತಿಯೋರ್ವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡವರು. ಸಾಲಗಾರರ ಕಿರುಕುಳಕ್ಕೆ ನೊಂದು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಒಂದು ವರ್ಷದ ಹಿಂದಷ್ಟೇ ಪ್ರಶಾಂತ್ ಪತ್ನಿಯಿಂದಲೂ ವಿಚ್ಛೇದನ ಪಡೆದುಕೊಂಡಿದ್ದರು. ಇದೀಗ ಸಾಲಗಾರರ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular