HomeKarnatakaBIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದ ಮಂಜುಳಾ ಅವರಿಗೆ ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರುಂಟಾಗಿತ್ತು. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಜುಳಾ ಇಂದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಮಂಜುಳಾ, ಮಗುವಿಗೆ ಜನ್ಮ ನೀಡಿದ್ದ ಆರು ದಿನಗಳಲ್ಲೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular