ಶಿವಮೊಗ್ಗ: ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಟಿಪ್ಪುನಗರ ನಿವಾಸಿ ರೇಷ್ಮಾ ಮೃತಪಟ್ಟ ಬಾಣಂತಿ.
ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆರಿಗೆ ಆದ ನಂತರ ಅಲ್ಲಿಯೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದ ರೇಷ್ಮಾ ತೀವ್ರ ರಕ್ತಸ್ರಾವದಿಂದ ಶನಿವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಐವರು ಬಾಣಂತಿಯರು ಮೃತಪಟ್ಟಂತಾಗಿದೆ. ಮೂರು ದಿನಗಳ ಹಿಂದೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ರೇಷ್ಮಾ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ ಇದು ಎರಡನೇ ಹೆರಿಗೆಯಾಗಿತ್ತು. ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಾಣಂತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.