HomeCrimeBIG NEWS: ಮಂಗನ ಕಾಯಿಲೆ: 29 ವರ್ಷದ ಯುವಕ ಬಲಿ

BIG NEWS: ಮಂಗನ ಕಾಯಿಲೆ: 29 ವರ್ಷದ ಯುವಕ ಬಲಿ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಅಥವಾ ಕೆ ಎಫ್ ಡಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. 29 ವರ್ಷದ ಯುವಕನೊಬ್ಬ ಮಂಗನ ಕಾಯಿಲೆಯಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಸಸಿತೋಟದ ನಿವಾಸಿ ಕಿಶೋರ್ ಮೃತ ದುರ್ದೈವಿ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಿಶೋರ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 20ರಂದು ಕಿಶೋರ್ ವಿಪರೀತ ಜ್ವರ, ಶೀತದಿಂದ ಬಳಲುತ್ತಿದ್ದರು. ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೂ ಜ್ವರ ಕಡಿಮೆಯಾಗದೇ ಕಾಯಿಲೆ ಉಲ್ಬಣಗೊಂಡಿತ್ತು. ತಪಾಸಣೆ ನಡೆಸಿದಾಗ ಮಂಗನ ಕಾಯಿಲೆ ಎಂಬುದು ದೃಢಪಟ್ಟಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿರಂತರ ಚಿಕಿತ್ಸೆ ಪಡೆದರೂ ಗುಣಮುಖನಾಗದೇ ಕಿಶೋರ್ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮಗನನ್ನು ಕಳೆದುಕೊಂಡಿರುವ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular