HomeKarnatakaಪುತ್ರಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಯುವಕರಿಂದ ರಕ್ಷಣೆ, ಪೊಲೀಸರಿಂದ ಸನ್ಮಾನ

ಪುತ್ರಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಾಯಿ: ಯುವಕರಿಂದ ರಕ್ಷಣೆ, ಪೊಲೀಸರಿಂದ ಸನ್ಮಾನ

ಶಿವಮೊಗ್ಗ: ಪುತ್ರಿಯನ್ನು ನದಿಗೆ ತಳ್ಳಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಇದನ್ನು ಗಮನಿಸಿದ ಯುವಕರು ಇಬ್ಬರನ್ನೂ ರಕ್ಷಣೆ ಮಾಡಿದ್ದಾರೆ. ಇವರ ಕಾರ್ಯವನ್ನು ಸಾರ್ವಜನಕರು ಶ್ಲಾಘಿಸಿದ್ದು, ಪೊಲೀಸರು ಸನ್ಮಾನಿಸಿದ್ದಾರೆ.

ಗಂಡ, ಹೆಂಡತಿ ಜಗಳ ಮಾಡಿಕೊಂಡಿದ್ದು, ಹೆಂಡತಿಯು ಮನನೊಂದು ತನ್ನ ಮಗಳೊಂದಿಗೆ ಚಂದ್ರಗುತ್ತಿ ಸಮಿಪದ ವರದನದಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಳ್ಳಲು ಬಂದಿದ್ದು, ಆಗ ತಾಯಿಯು ತನ್ನ ಮಗಳನ್ನು ತಳ್ಳುವಾಗ ಮಗಳು ಕೂಗಿದ್ದನ್ನು ಕೇಳಿ ಅಲ್ಲಿಯೇ ಮೀನು ಹಿಡಿಯುತ್ತಿದ್ದ ಯುವಕರಾದ ಸಾಹಿಲ್, ಸೋನು, ಯಾಸಿನ್ ಚಿಕ್ಕಮಾಕೊಪ್ಪ ಇವರು  ತಾಯಿ ಮಗಳನ್ನು ರಕ್ಷಣೆ ಮಾಡಿದ್ದಾರೆ.

ಸಮಯ ಪ್ರಜ್ಞೆಯಿಂದ ಇಬ್ಬರ ಪ್ರಾಣ ರಕ್ಷಣೆ ಮಾಡಿದ ಸಾರ್ವಜನಿಕರ ಕಾರ್ಯವನ್ನು ಶ್ಲಾಘಿಸಿ, ಸಾಹಿಲ್, ಸೋನು, ಯಾಸಿನ್  ರವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಹಾಗೂ ಸೊರಬ ಪೋಲಿಸ್ ಠಾಣೆ ವತಿಯಿಂದ ಸನ್ಮಾನಿಸಲಾಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ಸಿಪಿಐ ಸೊರಬ ವೃತ್ತ ಹಾಗೂ ಪಿಎಸ್ಐ ಸೊರಬ ಪೊಲೀಸ್ ಠಾಣೆ ರವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular