HomeKarnatakaBREAKING: ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ; ಯುವಕರ ಸಮಯಪ್ರಜ್ಞೆಯಿಂದ ಉಳಿಯಿತು...

BREAKING: ವರದಾ ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ; ಯುವಕರ ಸಮಯಪ್ರಜ್ಞೆಯಿಂದ ಉಳಿಯಿತು ಎರಡು ಜೀವ

ಶಿವಮೊಗ್ಗ: ತಾಯಿ ಹಾಗೂ ಮಗಳು ಇಬ್ಬರೂ ವರದಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಯುವಕರ ಸಮಯಪ್ರಜ್ಞೆಯಿಂದ ತಾಯಿ ಹಾಗೂ ಮಗಳ ಇಬ್ಬರ ಜೀವ ಉಳಿದಿದೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ತಾಯಿ ತನ್ನ ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮಗಳನ್ನು ನದಿಗೆ ತಳ್ಲುವಾಗ ಮಗಳು ಜೋರಾಗಿ ಅಳಲಾರಂಭಿಸಿದ್ದಾಳೆ. ಮಗಳ ಅಳುವಿನ ಶಬ್ಧ ಕೇಳಿ ಸಮೀಪವೇ ಇದ್ದ ಯುವಕರು ಸ್ಥಳಕ್ಕೆ ಓಡಿ ಬಂದಿದ್ದಾರೆ. ತಕ್ಷಣ ತಾಯಿ ಹಾಗೂ ಮಗಳು ಇಬ್ಬರನ್ನು ರಕ್ಷಿಸಿದ್ದಾರೆ.

ಇಬ್ಬರಿಗೂ ಧೈರ್ಯ ತುಂಬಿದ್ದಾರೆ. ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳದಂತೆ ಮನವೊಲಿಸಿದ್ದಾರೆ. ಸಾಹಿಲ್, ಸೋನು ಹಾಗೂ ಯಾಸಿನ್ ಎಂಬ ಮೂವರು ಯುವಕರು ತಾಯಿ ಹಾಗೂ ಮಗಳನ್ನು ರಕ್ಷಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವಕರ ಮಾನವೀಯತೆ ಹಾಗೂ ಸಮಯಪ್ರಜ್ಞೆಗೆ ಜಿಲ್ಲಾ ಪೊಲೀಸರು ಮೆಚ್ಚಿಗೆ ವ್ಯಕ್ತಪಡಿಸಿ ಗೌರವಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular