HomeLatest Newsಹಲ್ಕೆ-ಮುಪ್ಪಾನೆ ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತ

ಹಲ್ಕೆ-ಮುಪ್ಪಾನೆ ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತ

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದ ಶರಾವತಿ ಹಿನ್ನೀರು ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಹಲ್ಕೆ-ಮುಪ್ಪಾನೆ ಮಾರ್ಗದ ಲಾಂಚ್ ಸೇವೆ ಇಂದಿನಿಂದ ಸ್ಥಗಿತಗೊಳಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಮತ್ತು ಭಾರಂಗಿ ಹೋಬಳಿಯ ಸಂಪರ್ಕದ ಪ್ರಮುಖ ಮಾರ್ಗ ಇದಾಗಿದ್ದು, ಸಾರ್ವಜನಿಕರ ಸುರಕ್ಷತಾ ದೃಷ್ಟಿಯಿಂದ ಜೂ.2 ಇಂದಿನಿಂದ ಲಾಂಚ್ ಸೇವೆ ಸ್ಥಗಿತಗೊಳಿಸುವುದಾಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ತಿಳಿಸಿದೆ.

ಲಿಂಗನಮಕ್ಕಿ ಡ್ಯಾಂನಲ್ಲಿ ಶರಾವತಿ ಹಿನ್ನೀರಿನ ಮಟ್ಟ ದಿನೇ ದಿನೇ ಕಡಿಮೆಯಾಗುತ್ತಿದ್ದು, ನೀರಿನ ಆಳದಲ್ಲಿರುವ ಮರದ ಕಾಂಡಗಳು ಲಾಂಚ್‌ಗೆ ತಾಗುವ ಅಪಾಯವಿದೆ. ಜೊತೆಗೆ ವಾಹನ ಇಳಿಸುವ ಪ್ಲಾಟ್‌ಫಾರ್ಮ್ ಜಾಗದಲ್ಲಿ ಲಾಂಚ್ ಅಡಿಭಾಗ ನೆಲಕ್ಕೆ ತಾಗುತ್ತಿರುವುದರಿಂದ ಲಾಂಚ್ ಸೇವೆಯನ್ನ ಸ್ಥಗಿತಗೊಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಗಂದೂರು ಸೇತುವೆ ಆದ ಮೇಲೆ ಕರೂರು ಹೋಬಳಿಗೆ ಈ ಮುಪ್ಪಾನೆ ಮಾರ್ಗ ಕೆಲವು ಕಾರಣಗಳಿಂದ ಅತ್ಯಂತ ಮಹತ್ವದ್ದಾಗಿತ್ತು. ಕರೂರು ಹೋಬಳಿಯ ಪೊಲೀಸ್ ಠಾಣೆ ಮತ್ತು ಮೆಸ್ಕಾಂ ಕಚೇರಿಗಳು ಕಾರ್ಗಲ್-ಜೋಗದಲ್ಲಿದ್ದು, ಗ್ಯಾಸ್ ಸಿಲಿಂಡರ್ ಪಡೆಯಲು ಮತ್ತೀತರ ಕಾರಣಕ್ಕೆ ತುಮರಿ, ಸಿಗಂದೂರು ಮತ್ತು ಭಾರಂಗಿ ಹೋಬಳಿಯ ಜನ ಈ ಮಾರ್ಗದಲ್ಲೇ ಸಂಚರಿಸುತ್ತಾರೆ. ಜೊತೆಗೆ ಶಿರಸಿ-ಸಿದ್ದಾಪುರ ಭಾಗದ ಜನರು ಸಿಗಂದೂರಿಗೆ ಬರಲು ಇದೇ ಮಾರ್ಗ ಬಳಸುತ್ತಿದ್ದರು.

ಇದೀಗ ಲಾಂಚ್ ಸಂಚಾರ ತಾತ್ಕಾಲಿಕವಾಗಿ ಕೊನೆಗೊಂಡರೂ, ಮಳೆ ಹೆಚ್ಚಾಗಿ ನೀರಿನ ಮಟ್ಟ ಏರಿದಲ್ಲಿ ಲಾಂಚ್ ಸಂಚಾರ ಪುನಾರಂಭವಾಗಲಿದೆ ಎಂದು ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular