HomeCrimeಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಪತ್ನಿಯೊಂದಿಗೆ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದ ದುಷ್ಕರ್ಮಿ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಬಯಲಿಗೆಳೆದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ನಾಗೀಹಳ್ಳಿ ಗ್ರಾಮದ ಕೃಷ್ಣಪ್ಪ(33) ಕೊಲೆಯಾದ ವ್ಯಕ್ತಿ. ಆರೋಪಿ ಕಿರಣ್ ಮತ್ತು ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ.

ಪತಿ ನಾಪತ್ತೆಯಾದ ಬಗ್ಗೆ ಕೃಷ್ಣಪ್ಪನ ಪತ್ನಿ ದೂರು ನೀಡಿದ್ದು, ಶಿರಾಳಕೊಪ್ಪ ಠಾಣೆ ಪೊಲೀಸರು ಕಿರಣ್ ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೃಷ್ಣಪ್ಪನ ಪತ್ನಿಯೊಂದಿಗೆ ಕಿರಣ್ ಗೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಈ ವಿಷಯ ಗೊತ್ತಾಗಿ ಕೃಷ್ಣಪ್ಪ ಕಿರಣ್ ಗೆ ಬುದ್ಧಿವಾದ ಹೇಳಿದ್ದ. ಇದೇ ವಿಚಾರಕ್ಕೆ ತನ್ನ ಸ್ನೇಹಿತರಾದ ಶಿವು ಅಲಿಯಾಸ್ ಪ್ರತಾಪ್, ಗಣೇಶ ಅವರೊಂದಿಗೆ ಸೇರಿ ಸಂಚು ರೂಪಿಸಿದ ಕಿರಣ್ ಕೊಲೆ ಮಾಡಿದ್ದಾನೆ. ಕೃಷ್ಣಪ್ಪನ ಕೊಲೆಗೈದ ನಂತರ ತುಂಡು ತುಂಡಾಗಿ ಮೃತದೇಹ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಗೊಂದಿ ಸಮೀಪ ನದಿಗೆ ಎಸೆದಿದ್ದಾರೆ ಎನ್ನಲಾಗಿದೆ. ಶಿರಾಳುಕೊಪ್ಪ ಠಾಣೆ ಸಬ್ ಇನ್ ಸ್ಪೆಕ್ಟರ್ ಟಿ.ಬಿ. ಪ್ರಶಾಂತ್ ಕುಮಾರ್ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular