HomeLatest Newsಕುಂಸಿ ಯುವಕನ ಹತ್ಯೆ ಪ್ರಕರಣ: ಅಕ್ರಮ ಸಂಬಂಧ ಶಂಕೆ; ಇಬ್ಬರು ಆರೋಪಿಗಳು ಅರೆಸ್ಟ್

ಕುಂಸಿ ಯುವಕನ ಹತ್ಯೆ ಪ್ರಕರಣ: ಅಕ್ರಮ ಸಂಬಂಧ ಶಂಕೆ; ಇಬ್ಬರು ಆರೋಪಿಗಳು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗದ ಕುಂಸಿ ಗ್ರಾಮದಲ್ಲಿ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ಈ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಕುಂಸಿ ಗ್ರಾಮದಲ್ಲಿ ವಾಸು ಎಂಬ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು. ತಡರಾತ್ರಿ ಮನೆಗೆ ವಾಪಸ್ ಆಗುತ್ತಿದ್ದಾಗ ಎದುರಾದ ಇಬ್ಬರು ವ್ಯಕ್ತಿಗಳು ವಾಸು ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದಿದ್ದಾರೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಮೇಲ್ನೋಟಕ್ಕೆ ಅಕ್ರಮ ಸಂಬಂಧವೇ ಕೊಲೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular