ದೀಪಾವಳಿ: ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿಸಿದ ಮುಸ್ಲಿಂ ಯುವಕ

ಶಿವಮೊಗ್ಗ: ದೀಪಾವಳಿ ಹಬ್ಬದ ಅಮವಾಸ್ಯೆ ದಿನ ವ್ಯಾಪಾರಸ್ಥರು ಅಂಗಡಿಗಳಲ್ಲಿ, ಕಚೇರಿಗಳಲ್ಲಿ ಲಕ್ಷ್ಮೀ ಪೂಜೆ ಮಾಡುವುದು ಹಿಂದೂ ಸಂಪ್ರದಾಯದಲ್ಲಿ ಪದ್ಧತಿ. ಇಲ್ಲೋರ್ವ ಮುಸ್ಲಿಂ ಯುವಕ ತನ್ನ ಅಂಗಡಿಯಲ್ಲಿ ಲಕ್ಷ್ಮೀ ಪೂಜೆ ನೆರವೇರಿಸಿ ಗಮನ ಸೆಳೆದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ಅರಸಾಳು ಎಂಬ ಮುಸ್ಲಿಂ ಯುವಕ ತನ್ನ ಮೊಬೈಲ್ ಅಂಗಡಿಯಲ್ಲಿ ಹಿಂದೂ ಸಂಪ್ರದಾಯದಂತೆ ಲಕ್ಷ್ಮಿ ಪೂಜೆ ನೆರವೇರಿಸಿದ್ದಾರೆ.

ತನ್ವಿ ಮೊಬೈಲ್ ವರ್ಲ್ಡ್ ಎಂಬ ತನ್ನ ಅಂಗಡಿಯಲ್ಲಿ ಪ್ರತಿ ವರ್ಷದಂತೆ ಕಳಸ ಇರಿಸಿ, ಹಣ್ಣು-ಕಾಯಿ ನೈವೇದ್ಯ ಅರ್ಪಿಸುವ ಮೂಲಕ ಪುರೋಹಿತರಾದ ಕೋಡೂರು ಪ್ರಮೋದ ಜೋಯಿಸ್ ಅವರಿಂದ ಮುಸ್ಲಿಂ ಯುವಕ ಲಕ್ಷ್ಮೀ ಪೂಜೆ ನೆರವೇರಿಸಿದ್ದಾರೆ.

ನಾಡಿನೆಲ್ಲೆಡೆ ಲಕ್ಷ್ಮೀ ಪೂಜೆ ಹಾಗೂ ದೀಪಾವಳಿ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಅರಸಾಳು ಎಂಬ ಮುಸ್ಲಿಂ ಯುವಕ ತನ್ನ ಸ್ನೇಹಿತರೊಂದಿಗೆ ಹಿಂದೂ ಸಂಪ್ರದಾಯದಂತೆ ಲಕ್ಷ್ಮೀ ಪೂಜೆ ನೆರವೇರಿಸಿ ಸೌಹಾರ್ದತೆ ಮೆರೆದಿದ್ದಾರೆ.

ಯುವಕ ಅರಸಾಳು ಸತತ 5 ವರ್ಷಗಳಿಂದ ಇದೇ ಮಾದರಿಯಲ್ಲಿ ಲಕ್ಷ್ಮೀ ಪೂಜೆಯನ್ನು ನಡೆಸಿಕೊಂಡು ಬಂದಿದ್ದಾರೆ. ಅದೇ ವೇಳೆ ಅಂಗಡಿಯಲ್ಲಿ ಮುಸ್ಲಿಂ ಸಂಪ್ರದಾಯದಾಯಂತೆ ಕೂಡ ಧರ್ಮಗುರುಗಳಿಂದ ಪೂಜೆ ನೆರವೇರಿಸಲಾಯಿತು.

ಈ ವೇಳೆ ಮಾತನಾಡಿದ ಅರಸಾಳು, ಹಬ್ಬಗಳು ಸಂಬಂಧಗಳನ್ನು ಗಟ್ಟಿಗೊಳಸಿಬೇಕು. ಜಾತಿ- ಧರ್ಮ ನೆಪ ಮಾತ್ರ. ಎಲ್ಲರೂ ಒಗ್ಗಟ್ಟಿನಿಂದ ಕೂಡಿ ಹಬ್ಬಗಳನ್ನು ಆಚರಿಸೋಣ. ಸೌಹಾರ್ಧತೆ ಸಾರೋಣ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read