BIG NEWS: ಶಿವಮೊಗ್ಗ: ಆಪರೇಷನ್ ಕರಡಿ ಕಾರ್ಯಾಚರಣೆ ಸಕ್ಸಸ್

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರಡಿಯೊಂದು ಪ್ರತ್ಯಕ್ಷವಾಗಿ ಬೆಳ್ಳಂಬೆಳಿಗ್ಗೆ ಸ್ಥಳೀಯರಲ್ಲಿ ಆತಂಕವನ್ನುಂಟು ಮಾಡಿತ್ತು. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ ಒಂದೇ ಗಂಟೆಯಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಗೋಪಾಲಗೌಡ ಬಡವಾಣೆಯಲ್ಲಿ ವಾಕಿಂಗ್ ಮಾಡುತ್ತಿದ್ದ ತುಕಾರಾಂ ಎಂಬುವವರ ಮೇಲೆ ದಾಳಿ ನಡೆಸಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ತುಕಾರಾಂ ಗೆ ಗಾಯಗಳಾಗಿವೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕರಡಿ ಸೆರೆ ಹಿಡಿಯಲು ಕಾರ್ಯಾಚರಣೆ ನಡೆಸಿದ್ದಾರೆ. ಕರಡಿ ಓಡಾಡುತ್ತಿದ್ದ ಜಾಗದಲ್ಲಿ ಜನ ಸಂಚಾರಕ್ಕೆ ನಿರ್ಬಂಧ ಹೇರಿ ಆಪರೇಷನ್ ಟೂಲ್ಸ್ ನೊಂದಿಗೆ ಕಾರ್ಯಾಚರಣೆ ನಡೆಸಿದ್ದಾರೆ. ಹೆದರಿದ ಕರಡಿ ಪೊದೆಯೊಂದರಲ್ಲಿ ಅವಿತುಕುಳಿತಿದೆ. ಪೊದೆ ಸುತ್ತ ಬಲೆ ಹಾಕಿ ಬೇಲಿ ರೀತಿಯಲ್ಲಿ ಸುತ್ತುವರೆದು ಕರಡಿ ಡಾರ್ಟ್ ಮಾಡಿ ಅರವಳಿಕೆ ನೀಡಿದ್ದಾರೆ. ಬಳಿಕ ಕರಡಿ ಸೆರೆ ಹಿಡಿದು ಬೋನಿಗೆ ಶಿಫ್ಟ್ ಮಾಡಿ ಕರೆದೊಯ್ದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read