HomeKarnatakaಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 25 ರಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಮಾರ್ಚ್ 25ರಂದು ದಾವಣಗೆರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪ ಸಮಾರಂಭ ನಡೆಯಲಿದ್ದು, ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 7.40 ಕ್ಕೆ ದೆಹಲಿಯಿಂದ ಹೊರಟು ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮೋದಿ ಹೆಲಿಕಾಫ್ಟರ್ ಮೂಲಕ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆಗೆ ಹೆಲಿಕಾಪ್ಟರ್ ಮೂಲಕ ತೆರಳಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾರೋಪದಲ್ಲಿ ಭಾಗವಹಿಸಿದ ನಂತರ ಹೆಲಿಕಾಪ್ಟರ್ ನಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಶಿವಮೊಗ್ಗದಿಂದ ನವದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular