ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸ್ಥಳಕ್ಕೆ ಧಾವಿಸಿದ ಪೊಲೀಸರಿಗೆ ಶಾಕ್: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ರಕ್ಷಣೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಸಂಕದ ಹೊಳೆ ಗ್ರಾಮದ ಸಮೀಪ ನದಿಯಲ್ಲಿ ತೇಲಿ ಬಂದ ವ್ಯಕ್ತಿಯನ್ನು ಪೊಲೀಸರು ಸೋಮವಾರ ರಕ್ಷಿಸಿದ್ದಾರೆ.

ನದಿಯಲ್ಲಿ ಶವ ತೇಲಿ ಬರುತ್ತಿದೆ ಎಂದು ಸಾರ್ವಜನಿಕರೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಾದ ಲೋಕೇಶ್, ಸಾದತ್ ಕೂಡಲೇ ಸ್ಥಳಕ್ಕೆ ಧಾವಿಸಿದ್ದು, ನದಿಯಲ್ಲಿದ್ದ ವ್ಯಕ್ತಿಯನ್ನು ಪರಿಶೀಲಿಸಿದಾಗ ಜೀವಂತವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಗಮನಕ್ಕೆ ಬಂದಿದೆ.

ಆತನನ್ನು ಎತ್ತಿಕೊಂಡು ಸುಮಾರು ಒಂದು ಕಿಲೋಮೀಟರ್ ನಷ್ಟು ನದಿ ನೀರಿನಲ್ಲಿ ನಡೆದುಕೊಂಡು ಬಂದು ದಡಕ್ಕೆ ತರಲಾಗಿದೆ. ಸ್ಥಳದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಾಹನದಲ್ಲಿ ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಗಿದ್ದು, ವ್ಯಕ್ತಿಯ ಜೀವ ಉಳಿಸಲಾಗಿದೆ. ಪೊಲೀಸ್ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆಗೆ ಎಸ್ಪಿ ಮಿಥುನ್ ಕುಮಾರ್ ಪ್ರಶಂಶಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read