ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ 2, ಘಟಕ -5ರ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿದ್ದು, ಜ. 30, 31 ಮತ್ತು ಫೆ. 01 ರಂದು 3 ದಿನಗಳು ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಜ. 30 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಮಿಳಗಟ್ಟ, ಬುದ್ದನಗರ, ಕಿಣಿ ಲೇಔಟ್, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಜ. 31 ರಂದು ಬೆಳಗ್ಗೆ 10.00 ರಿಂದ ಮ. 3.00 ರವರೆಗೆ ಟಿಪ್ಪುನಗರ 1 ರಿಂದ 7ನೇ ಕ್ರಾಸ್ವರೆಗೆ ಎಡಭಾಗ, ಕೆ.ಕೆ.ಶೆಡ್, ಪದ್ಮಾ ಟಾಕೀಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಫೆ. 01 ರಂದು ಬೆ. 10 ರಿಂದ ಸಂ. 04 ರವರೆಗೆ ಪಿಯರ್ಲೈಟ್ ಫ್ಯಾಕ್ಟರಿ, ಎನ್.ಟಿ.ರಸ್ತೆ, ಮಂಡ್ಲಿ ಬೈಪಾಸ್, ಮಂಡ್ಲಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರ
ಶಿವಮೊಗ್ಗ : ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆ.ಸಿ.ಟಿ.ಯು ಬೆಂಗಳೂರು ಹಾಗೂ ಅವೇಕ್-ಕರ್ನಾಟಕ ರಾಜ್ಯ ಮಹಿಳಾ ಉದ್ಯಮಿಗಳ ಸಂಸ್ಥೆ ಇವರುಗಳ ಸಹಯೋಗದಲ್ಲಿ ಜ.30 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣ, ಶಿವಪ್ಪನಾಯಕ ಸಂಕೀರ್ಣ, 3ನೇ ಮಹಡಿ, ನೆಹರು ರಸ್ತೆ, ಶಿವಮೊಗ್ಗ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ “One Day Awarness workshop on BDSP” ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಬೆಂಗಳೂರಿನ ಅವೇಕ್ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಭುವನೇಶ್ವರಿ ಸಿ. ರವರು ಉದ್ಘಾಟಿಸಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್. ಗಣೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅವೇಕ್ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಹೇಮಮಾಲಿನ, ಖಜಾಂಚಿ ಶ್ರೀಮತಿ ಶ್ಯಾಮಲ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಶರತ್ ಗೌಡ ಪಿ. ಹಾಗೂ ಜಿಲ್ಲಾ ಲೀಡ್ ಬ್ಯಾಂಕ್, ಕೆನರಾ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಪಿ. ಇವರುಗಳು ಉಪಸ್ಥಿತರಿರಲಿದ್ದಾರೆ.

