HomeKarnatakaBREAKING: ಅತ್ತೆ-ಮಾವನ ಕಿರುಕುಳ: ಬೆಂಕಿ ಹಚ್ಚಿಕೊಂಡು 4 ತಿಂಗಳ ಗರ್ಭಿಣಿ ನರ್ಸ್ ಆತ್ಮಹತ್ಯೆ: ನಾಲ್ವರು ಅರೆಸ್ಟ್

BREAKING: ಅತ್ತೆ-ಮಾವನ ಕಿರುಕುಳ: ಬೆಂಕಿ ಹಚ್ಚಿಕೊಂಡು 4 ತಿಂಗಳ ಗರ್ಭಿಣಿ ನರ್ಸ್ ಆತ್ಮಹತ್ಯೆ: ನಾಲ್ವರು ಅರೆಸ್ಟ್

ಶಿವಮೊಗ್ಗ: ಅತ್ತೆ-ಮಾವನ ಕಿರುಕುಳಕ್ಕೆ ಮನನೊಂದ ನಾಲ್ಕು ತಿಂಗಳ ಗರ್ಭಿಣಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಾಕ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ.

ಶ್ವೇತಾ (30) ಮೃತ ದುರ್ದೈವಿ. ಮನೆಯವರ ಕಿರುಕುಳಕ್ಕೆ ನೊಂದು ಮಾರ್ಚ್ 29 ರಂದು ಗರ್ಭಿಣಿ ಶ್ವೇತಾ ಸೊರಬ ತಾಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭಿರ ಸ್ಥಿತಿಯಲ್ಲಿದ್ದ ಆಕೆಯನ್ನು ಉಡುಪಿ ಜಿಲ್ಲೆಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಶ್ವೇತಾ ಇಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಶ್ವೇತಾ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಶ್ವೇತಾ ಪೋಷಕರು ಅತ್ತೆ-ಮಾವನ ವಿರುದ್ಧ ದೂರು ನೀಡಿದ್ದಾರೆ.

ಅತ್ತೆ-ಮಾವನ ಕಿರುಕುಳಕ್ಕೆ ಬೇಸತ್ತು ಶ್ವೇತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಸೊರಬ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಶ್ವೇತಾಳ ಅತ್ತೆ-ಮಾವ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಶ್ವೇತಾಳ ಮಾಸ ಸಣ್ಣಪ್ಪ, ಅತ್ತೆ ಜಾನಕಿ, ಹೇಮಂತ್, ದಿವ್ಯಾ ಸೇರಿ ನಾಲ್ವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ತಡೆ ಸಹಾಯವಾಣಿ: ಎಲ್ಲಾ ಸಮಸ್ಯೆಗಳಿಗೂ ಸಾವು ಪರಿಹಾರವಲ್ಲ. ಆತ್ಮಹತ್ಯೆ ತಡೆ ಸಹಾಯವಾಣಿ ಸಂಖ್ಯೆ (022)27546669

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular