ರೈಲಿನಲ್ಲಿ ಚಿನ್ನದ ಸರ ಎಗರಿಸುತ್ತಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ರೈಲು ನಿಲ್ದಾಣಗಳಲ್ಲಿ ಚಿನ್ನಾಭರಣ ಕಳವು ಮಾಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ವಿಜಯನಗರ ಜಿಲ್ಲೆ ಹೂವಿನಹಡಗಲಿ ಬಿಟ್ಯಾನ ತಾಂಡಾ ನಿವಾಸಿ ಧರ್ಮಾನಾಯ್ಕ್(45) ಬಂಧಿತ ಆರೋಪಿ. ಡಿಸೆಂಬರ್ 23ರಂದು ಬೆಂಗಳೂರು -ತಾಳಗುಪ್ಪ ರೈಲು ಆನಂದಪುರ ನಿಲ್ದಾಣಕ್ಕೆ ತಲುಪಿದಾಗ ರೈಲಿನಲ್ಲಿದ್ದ ಮಹಿಳೆಯೊಬ್ಬರ 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರ ಎಗರಿಸಿದ್ದಾನೆ. ರೈಲ್ವೇ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ಸಾಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ವಿಚಾರಣೆಗಾಗಿ ಪೊಲೀಸರ ವಶಕ್ಕೆ ಪಡೆಯಲಾಗಿದೆ.

ಮಾಂಗಲ್ಯ ಸರವು ಕಳುವು ಮಾಡಿದ ನಂತರ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಧರ್ಮಾನಾಯ್ಕ್ ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ 60 ಗ್ರಾಂ ಚಿನ್ನದ ಸರ ಪತ್ತೆಯಾಗಿದೆ. ಈ ಬಗ್ಗೆ ವಿಚಾರಿಸಿದಾಗ ಆನಂದಪುರಂನಲ್ಲಿ ದೋಚಿರುವುದಾಗಿ ಒಪ್ಪಿಕೊಂಡಿದ್ದಾನೆ. 7 ತಿಂಗಳ ಹಿಂದೆ ಬೆಂಗಳೂರಿನ ಹೆಬ್ಬಾಳ ರೈಲ್ವೆ ನಿಲ್ದಾಣದಲ್ಲಿ ಸರ ಕಳವು ಮಾಡಿ ಊರಿನಲ್ಲಿರುವ ಚಿನ್ನದ ವ್ಯಾಪಾರಿಗೆ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದು, ಆತ ಇನ್ನಷ್ಟು ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ಹಿನ್ನಲೆಯಲ್ಲಿ ಹೆಚ್ಚಿನ ವಿಚಾರಣೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read