HomeKarnatakaಶಿವಮೊಗ್ಗ: ರೌಡಿಶೀಟರ್ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಶಿವಮೊಗ್ಗ: ರೌಡಿಶೀಟರ್ ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

ಶಿವಮೊಗ್ಗ: ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕೊಲೆ ಪ್ರಕರಣದ ಆರೋಪಿ ಉಮೇಶನಾಯ್ಕ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಶಿವಮೊಗ್ಗದ ಎನ್ಆರ್ ಪುರ ರಸ್ತೆಯ ಲಿಂಗಪುರ ಬಳಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಬಂಧನಕ್ಕೆ ತೆರಳಿದ್ದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಉಮೇಶನಾಯ್ಕ ಪರಾರಿಯಾಗಲು ಮುಂದಾಗಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ತುಂಗಾನಗರ ಸಿಪಿಐ ಗುರುರಾಜ್ ಫೈರಿಂಗ್ ಮಾಡಿದ್ದಾರೆ. ಗಾಯಾಳು ಆರೋಪಿ ಉಮೇಶನಾಯ್ಕನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರೌಡಿಶೀಟರ್ ಕೊಲೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಕುವಿನಿಂದ ಇರಿದು ರೌಡಿಶೀಟರ್ ಕೊಲೆ ಮಾಡಿದ ಘಟನೆ ಶಿವಮೊಗ್ಗ ಸಮೀಪದ ರಾಮನಕೊಪ್ಪ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಭಾನುವಾರ ಇಸ್ಪೀಟ್ ಆಡುತ್ತಿದ್ದ ರೌಡಿಶೀಟರ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಕಿರಣ್ ಅಲಿಯಾಸ್ ಕುಳ್ಳಿ(28) ಕೊಲೆಯಾದ ವ್ಯಕ್ತಿ. ರಾಮನಕೊಪ್ಪ ಗ್ರಾಮದ ಹೊರವಲಯದಲ್ಲಿ ಇಸ್ಪೀಟ್ ಆಡುತ್ತಿದ್ದ ವೇಳೆ ಅಲ್ಲಿಗೆ ಬಂದ ದುಷ್ಕರ್ಮಿಗಳು ಹಣಕಾಸಿನ ವಹಿವಾಟು ಕುರಿತು ಮಾತನಾಡಲು ಕರೆದಿದ್ದಾರೆ. ಈ ವೇಳೆ ಕಿರಣ್ ಮೇಲೆ ಚಾಕುವಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ವೈಯಕ್ತಿಕ ಮತ್ತು ಹಳೆಯ ದ್ವೇಷವೇ ಕೃತ್ಯಕ್ಕೆ ಕಾರಣವೆನ್ನಲಾಗಿದೆ. ತುಂಗಾನಗರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಉಮೇಶ್ವನಾಯ್ಕನ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಎರಡು ಗುಂಪುಗಳ ನಡುವೆ ಮಾರಾಮಾರಿ

ದಾವಣಗೆರೆ: ದಾವಣಗೆರೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ತಲ್ವಾರ್ ಮತ್ತು ದೊಣ್ಣೆಗಳಿಂದ ಎರಡು ಗುಂಪುಗಳು ಹೊಡೆದಾಡಿಕೊಂಡಿವೆ.

ದಾವಣಗೆರೆ ನಗರದ ಬಿ.ಡಿ. ಲೇಔಟ್ ನಲ್ಲಿ ಘಟನೆ ನಡೆದಿದೆ. ಮೈನು, ಜುನೈದ್, ಇರ್ಫಾನ್ ಸೇರಿ ನಾಲ್ವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಮೊಹಮ್ಮದ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯುವಕರ ಗುಂಪಿನಿಂದ ದಾಳಿ ನಡೆದಿದೆ. ಹಳೆಯ ವೈಷಮ್ಯ, ಕ್ಷುಲ್ಲಕ ಕಾರಣಕ್ಕೆ ಗುಂಪು ಘರ್ಷಣೆ ನಡೆದಿದೆ ಎನ್ನಲಾಗಿದೆ.

ಗಾಯಾಳುಗಳಿಗೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ದಾವಣಗೆರೆಯ ಆಜಾದ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಬ್ಬಿಣದ ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು

ಮೈಸೂರು: ಮೈಸೂರಿನಲ್ಲಿ ಕಬ್ಬಿಣದ ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾನೆ, ಕುಡಿದ ಮತ್ತಿನಲ್ಲಿ ಕಬ್ಬಿಣದ ಕಂಬಿ ಬೇಲಿ ಮೇಲಿನಿಂದ ಹಾರಲು ಹೋಗಿ ದುರ್ಘಟನೆ ಸಂಭವಿಸಿದೆ. ಕಬ್ಬಿಣದ ಚೂಪಾದ ಭಾಗ ತೊಡೆ ಭಾಗಕ್ಕೆ ಚುಚ್ಚಿ ತೀವ್ರ ರಕ್ತಸ್ರಾವ ಉಂಟಾಗಿದೆ.

ಮೈಸೂರಿನ ರಾಜೀವ ನಗರದ ನಿವಾಸಿ ರವಿ(38) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೈಸೂರು ಮೃಗಾಲಯದ ಬಳಿ ಕಬ್ಬಿನ ಹಾಲು ವ್ಯಾಪಾರ ಮಾಡುತ್ತಿದ್ದ ರವಿ ಒಂದು ತಿಂಗಳಿನಿಂದ ಕುಡಿತದ ಚಟಕ್ಕೆ ದಾಸನಾಗಿದ್ದ ಎನ್ನಲಾಗಿದೆ. ಮಧ್ಯರಾತ್ರಿ ಮನೆಯಿಂದ ಹೊರ ಬಂದಿದ್ದ ರವಿ ಬೇಲಿ ಹಾರಲು ಹೋಗಿ ದುರ್ಘಟನೆ ಸಂಭವಿಸಿದೆ. ಮೈಸೂರಿನ ನಜಾರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular