HomeKarnatakaBIG NEWS: ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಯ ಡಿ ಗ್ರೂಪ್ ನೌಕರ ಬಲಿ

BIG NEWS: ಡೆಂಗ್ಯೂ ಜ್ವರಕ್ಕೆ ಆಸ್ಪತ್ರೆಯ ಡಿ ಗ್ರೂಪ್ ನೌಕರ ಬಲಿ

ಶಿವಮೊಗ್ಗ: ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿರುವ ನಡುವೆಯೇ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಆಸ್ಪತ್ರೆಯಲ್ಲಿಯೇ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರರೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಸಾಗರ ಉಪವಿಭಾಗೀಯ ಆಸ್ಪತ್ರೆಯ ನೌಕರ ತಾಳಗುಪ್ಪ ನಿವಾಸಿ ನಾಗರಾಜ್ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾರೆ. 33 ವರ್ಷದ ನಾಗರಾಜ್ ಕಳೆದ ಒಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದರು.

ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ನಾಗರಾಜ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular