HomeLatest NewsBREAKING : ಶಿವಮೊಗ್ಗದ ಸಿಮ್ಸ್ ಪ್ರೊಫೆಸರ್ ನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ತರಗತಿಗಳನ್ನು ಬಹಿಷ್ಕರಿಸಿ...

BREAKING : ಶಿವಮೊಗ್ಗದ ಸಿಮ್ಸ್ ಪ್ರೊಫೆಸರ್ ನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ತರಗತಿಗಳನ್ನು ಬಹಿಷ್ಕರಿಸಿ ಪ್ರತಿಭಟನೆ

ಶಿವಮೊಗ್ಗ: ಶಿವಮೊಗ್ಗದ ಸಿಮ್ಸ್ ಕಾಲೇಜು ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳವೆಸಗಿರುವ ಆರೋಪ ಕೇಳಿಬಂದಿದೆ. ಪ್ರೊಫೆಸರ್ ಬಂಧನಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ಸಿಮ್ಸ್ ಕಾಲೇಜು ಪ್ರೊಫೆಸರ್ ಡಾ. ಅಶ್ವಿನ್ ಹೆಬ್ಬಾರ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಂತ್ರಸ್ತ ವಿದ್ಯಾರ್ಥಿನಿ ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಪ್ರೊಫೆಸ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಪ್ರೊಫೆಸರ್ ಡಾ.ಅಶ್ವಿನ್ ಹೆಬ್ಬಾರ್ ನಾಪತ್ತೆಯಾಗಿದ್ದಾರೆ. ಪ್ರೊಫೆಸರ್ ನನ್ನು ಬಂಧಿಸುವಂತೆ ಆಗ್ರಹಿಸಿ ಸಿಮ್ಸ್ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ತರಗತಿಗಳನ್ನು ಬಹಿಷ್ಕರಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಕಾಲೇಜು ಬಳಿ ಪ್ರತಿಭಟನೆ ನಡೆಸುತ್ತಿದ್ದು, ಪ್ರೊಫೆಸರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular